Home Uncategorized ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ದಪ್ಪ ಚರ್ಮದ ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ದಪ್ಪ ಚರ್ಮದ ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

10
0

ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಬೆಂಗಳೂರು: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಬಿಜೆಪಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ಬಿಜೆಪಿ ನಾಯಕರು ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಇದು ಕೊಲೆಗಡುಕ ಸರ್ಕಾರ ಎಂದು ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಮಾಜಿ ಸಿಎಂ ಶಾಸಕ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿತು.@XpressBengaluru pic.twitter.com/HX5W2CwUSp
— kannadaprabha (@KannadaPrabha) July 12, 2023

ಬೆಳಗಾವಿಯ ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮತ್ತು ಮೈಸೂರಿನ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣ ಸಾಕಷ್ಟು ಚರ್ಚೆಯಾಗುತ್ತಿದೆ. ಜೈನಮುನಿಯವರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದರು.

ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು: ನಂತರ ರಾಜಭವನಕ್ಕೆ ಪಾದಯಾತ್ರೆ ತೆರಳಿದ ಬಿಜೆಪಿ ನಾಯಕರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇದು ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಬದುಕಲು ದುಸ್ತರವಾಗುತ್ತದೆ. ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ನಿರ್ದೇಶನ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.

ತುಘಲಕ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಅರಾಜಕತೆ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ.

ಪ್ರಕರಣಗಳಲ್ಲಿ ಪ್ರಭಾವಿ‌ಗಳನ್ನು ಹಾಗೂ ಸಚಿವರ ಪುತ್ರರನ್ನು ರಕ್ಷಣೆ ಮಾಡಲಾಗುತ್ತಿದೆ. ಕೊಲೆಗಡುಕ ಸರ್ಕಾರಕ್ಕೆ ಧಿಕ್ಕಾರ..! ಧಿಕ್ಕಾರ..! pic.twitter.com/rw5BhhDJrW
— BJP Karnataka (@BJP4Karnataka) July 12, 2023

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಎರಡೇ ತಿಂಗಳಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯ ಜನರಿಗೆ ರಕ್ಷಣೆಯಿಲ್ಲ. ಹೆಣ್ಣುಮಕ್ಕಳಿಗೆ ಭೀತಿ ಉಂಟಾಗಿದೆ. ಜೈನಮುನಿಗಳ ಬರ್ಬರವಾಗಿ ಕೊಲೆಯಾಗಿದೆ. ಆದರೆ ಈ ದಪ್ಪ ಚರ್ಮದ ಸರ್ಕಾರಕ್ಕೆ ಏನೂ ಅನಿಸುತ್ತಿಲ್ಲ, ನಮ್ಮ ಕಾರ್ಯಕರ್ತರ ಕೊಲೆಯಾಗುತ್ತಿದೆ. ನಿನ್ನೆ ಐಟಿ ಕಂಪೆನಿಯ ಟೆಕ್ಕಿಗಳನ್ನು ಹಾಡಹಗಲೇ ಕೊಲೆ ಮಾಡಿದ್ದಾರೆ ಎಂದರೆ ಕೊಲೆಗಡುಕರಿಗೆ ನಿರ್ಭೀತಿಯಿದೆ, ಪೊಲೀಸರ ಮೇಲೆ ಹೆದರಿಕೆಯಿಲ್ಲ ಎಂಬಂತ ವಾತಾವರಣ ಇಡೀ ರಾಜ್ಯದಲ್ಲಿ ಸೃಷ್ಟಿಯಾಗಿದೆ.

ಪೊಲೀಸ್ ಅಧಿಕಾರಿಗಳು, ಕೆಳ ಹಂತದ ಪೊಲೀಸ್ ಅಧಿಕಾರಿಗಳ ಮೇಲೆ ಇಂದು ಒತ್ತಡವಿದೆ, ಇದು ಬದಲಾದ ಸರ್ಕಾರದ ಧೋರಣೆಯನ್ನು, ಕೆಲಸದ ವೈಖರಿಯನ್ನು ತೋರಿಸುತ್ತದೆ. ಇಂತಹ ಪ್ರಕರಣಗಳು ನಡೆದಾಗ ನ್ಯಾಯ ರೀತಿಯಲ್ಲಿ ತನಿಖೆ, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿಲ್ಲ. ಇದಕ್ಕಾಗಿ ಇದನ್ನು ಕೊಲೆಗಡುಕ, ಜಂಗಲ್ ರಾಜ್ಯ ಸರ್ಕಾರ ಎಂದು ಕರೆಯಲು ಇಚ್ಛಿಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಜೈನಮುನಿ ಹತ್ಯೆ ಕೇಸು ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಮನವಿ ಮಾಡಿದರು.BJP party leaders led by former Chief Minister @BSBommai & others protested in front of Vidhana Soudha against the brutal murder of Jain monk and urged that the case is handed over to CBI for investigation.@santwana99 @XpressBengaluru @KannadaPrabha @ramupatil_TNIE pic.twitter.com/o14oUTEXWu— Nagaraja Gadekal (@gadekal2020) July 12, 2023

LEAVE A REPLY

Please enter your comment!
Please enter your name here