ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಮತ್ತೊಮ್ಮೆ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ… ಮಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಮತ್ತೊಮ್ಮೆ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸೋಮವಾರ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ ಉದ್ದೇಶಿಸಿ ಮಾತನಾಡಿದ ದೇವೇಗೌಡರು, ಕಾರ್ಯಕರ್ತರು ವಿಶ್ರಾಂತಿ ಪಡೆಯದೆ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.
ಇದನ್ನು ಓದಿ: ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ: ಕುಮಾರಸ್ವಾಮಿ
ಸಿಎಂ ಆಗಿ ಕೃಷಿ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ ಎಂದು ಮತದಾರರಿಗೆ ನೆನಪಿಸಿದ ಮಾಜಿ ಪ್ರಧಾನಿ, 2018ರಲ್ಲಿ ಸಮ್ಮಿಶ್ರ ಸರ್ಕಾರದ ಪ್ರಸ್ತಾಪ ಮುಂದಿಟ್ಟಿದ್ದೆ ಕಾಂಗ್ರೆಸ್. ಕಾಂಗ್ರೆಸ್ ನಾಯಕರಾದ ಅಶೋಕ್ ಗೆಹ್ಲೋಟ್ ಮತ್ತು ಗುಲಾಂ ನಬಿ ಆಜಾದ್ ಅವರು ನನ್ನನ್ನು ಭೇಟಿ ಮಾಡಿ ಕುಮಾರಸ್ವಾಮಿಯನ್ನು ಸಿಎಂ ಮಾಡಲು ಮುಂದಾದರು ಮತ್ತು ನಂತರ ಏನಾಯಿತು ಎಂದು ನಿಮಗೆ ತಿಳಿದಿದೆ. ನಾನು ಮೋದಿಯವರ ಹೇಳಿಕೆಗಳಿಗೆ ಆದ್ಯತೆ ನೀಡುವುದಿಲ್ಲ ಮತ್ತು ಟೀಕಿಸುವುದಿಲ್ಲ ಎಂದರು.
ಮೋದಿ ವಿರುದ್ಧ ನಾನು ಯಾವುದೇ ವೈಯಕ್ತಿಕ ಟೀಕೆ ಮಾಡುವುದಿಲ್ಲ. ಅವರಿಗೆ ಮಾತನಾಡುವ ಸ್ವಾತಂತ್ರ್ಯವಿದೆ. ಮೇ 13 ರಂದು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.