Home Uncategorized ರಾಜ್ಯದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಬಿಡದಂತೆ ತೀವ್ರಗೊಂಡ ಹೋರಾಟ, ಬಂದ್​ಗೆ ಮಂಡ್ಯ, ಮದ್ದೂರಿನಲ್ಲಿ...

ರಾಜ್ಯದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಬಿಡದಂತೆ ತೀವ್ರಗೊಂಡ ಹೋರಾಟ, ಬಂದ್​ಗೆ ಮಂಡ್ಯ, ಮದ್ದೂರಿನಲ್ಲಿ ಉತ್ತಮ ಪ್ರತಿಕ್ರಿಯೆ

38
0

ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸದಂತೆ ಒತ್ತಾಯಿಸಿ ರೈತ ಸಂಘಟನೆಗಳು ಶನಿವಾರ ಮಂಡ್ಯ ಹಾಗೂ ಮದ್ದೂರಿನಲ್ಲಿ ಬಂದ್ ನಡೆಸುತ್ತಿದ್ದು, ಬಂದ್’ಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸದಂತೆ ಒತ್ತಾಯಿಸಿ ರೈತ ಸಂಘಟನೆಗಳು ಶನಿವಾರ ಮಂಡ್ಯ ಹಾಗೂ ಮದ್ದೂರಿನಲ್ಲಿ ಬಂದ್ ನಡೆಸುತ್ತಿದ್ದು, ಬಂದ್’ಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಆಟೋ ಚಾಲಕರು, ಖಾಸಗಿ ವಾಹನ ಮಾಲೀಕರು, ಸ್ಟುಡಿಯೋ ಮಾಲೀಕರು, ಜಿಲ್ಲೆಯ ಎಲ್ಲಾ ವರ್ಗದ ಜನತೆ, ವಿದ್ಯಾರ್ಥಿ ಸಮೂಹ, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬಂದ್‌ನಲ್ಲಿ ಭಾಗವಹಿಸಿ ಬೆಂಬಲ ಸೂಚಿಸುತ್ತಿವೆ.

#WATCH | Mandya, Karnataka: Security arrangements tightened in Mandya in view of the ‘bandh’ called by farmers and pro-Kannada outfits on the Cauvery river water sharing issue. pic.twitter.com/pkYEZMNYSW
— ANI (@ANI) September 23, 2023

ಬೆಳಿಗ್ಗೆ 8ರಿಂದ ಸಂಜೆ 6 ಗಂಟೆವರೆಗೂ ಬಂದ್ ಇರಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಇನ್ನು ಮದ್ದೂರಿನಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದು, ಟಿಬಿ ಸರ್ಕಲ್ ನಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಬೆಂಗಳೂರು ಮೈಸೂರು ಹೆದ್ದಾರಿ ತಡೆದು ತಲೆಯ ಮೇಲೆ ಕಬ್ಬಿನ ಹೊರೆ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳೂ ಕೂಡ ಭಾಗಿಯಾಗಿರುವುದು ಕಂಡು ಬಂದಿದೆ.

ಸಿಎಂ ನಿವಾಸದಲ್ಲಿ ಮಹತ್ವದ ಚರ್ಚೆ
ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಮಹತ್ವದ ಚರ್ಚೆ ನಡೆಯುತ್ತಿದ್ದು ಭದ್ರತೆ, ಸದ್ಯದ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳಿಗೆ ಗೆ ಗೃಹ ಸಚಿವ ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್ ಭಾಗಿಯಾಗಿದ್ದರು.

ಶನಿವಾರ ಅತ್ತಿಬೆಲೆ ಬಂದ್‌ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈಗಾಗಲೇ ತಮಿಳುನಾಡು ಗಡಿಯಲ್ಲಿ ರಸ್ತೆ ತಡೆಗಳು ಶುರುವಾಗಿವೆ. ಸಂಸದರ ಮನೆಗಳಿಗೆ ಮುತ್ತಿಗೆ ಹಾಕಲು ಕರವೇ ತೀರ್ಮಾನಿಸಿದೆ. ಕರವೇ ನಾರಾಯಣಗೌಡರ ಬಣ ಕರ್ನಾಟಕ ಬಂದ್‌ಗೆ ಕರೆ ನೀಡುವ ಬಗ್ಗೆ ಚಿಂತನೆ ನಡೆಸಿದೆ.

ಬಿಜೆಪಿ ಪ್ರತಿಭಟನೆ

ಈ ನಡುವೆ ಬಿಜೆಪಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲವು ಮುಂದಾಗಿದೆ.

ನಗರದ ಮೈಸೂರು ಬ್ಯಾಂಕ್ ಸರ್ಕಲ್ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರತಿಭಟನೆಯ ಸಂದರ್ಭದಲ್ಲಿ ಬೆಂಗಳೂರಲ್ಲಿ ಸಂಚಾರ ದಟ್ಟಣೆಯುಂಟಾಗುವ ಸಾಧ್ಯತೆಯಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಸುಮಾರು 300 ರಿಂದ 400 ಪೊಲೀಸ್ ಸಿಬ್ಬಂದಿ, 3ಕ್ಕೂ ಹೆಚ್ಚು ಕೆ.ಎಸ್.ಆರ್.ಪಿ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಫ್ರೀಡಂ ಪಾರ್ಕ್​ ಸುತ್ತಮುತ್ತ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರಿ‌ ಪೊಲೀಸರನ್ನು ಸಹ ನಿಯೋಜಿಸುವ ಮೂಲಕ ಪ್ರತಿಭಟನಕಾರರಿಗೆ ಮತ್ತು ವಾಹನ ಸವಾರರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ.

ಕಾವೇರಿ ನೀರಿಗಾಗಿ ಪ್ರತಿಭಟನೆಯ ಕಾವು ಹೆಚ್ಚಾದ ಬೆನ್ನಲ್ಲೇ ತಮಿಳುನಾಡಿನ ಬಸ್​ಗಳಿಗೆ ಭದ್ರತೆ ವಹಿಸಲಾಗಿದೆ. ಕರ್ನಾಟಕ-ತಮಿಳುನಾಡು ಗಡಿ ಭಾಗಗಳಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು ಅತ್ತಿಬೆಲೆ, ಹೊಸೂರು ರಸ್ತೆ ಭಾಗದಲ್ಲಿ ಭದ್ರತೆ ಹೆಚ್ಚುಸಲಾಗಿದೆ. ಅಲ್ಲದೇ ತಮಿಳುನಾಡು ಬಸ್​ಗಳು ತಂಗುವ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಕೆಎಸ್ಆರ್​ಪಿ ಪೊಲೀಸ್ ತುಕಡಿ ನಿಯೋಜಿಸಲಾಗಿದೆ.

LEAVE A REPLY

Please enter your comment!
Please enter your name here