Home Uncategorized ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

47
0

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ  ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ  ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.

8th April:

Scattered to fairly widespread light to moderate thundershowers with isolated heavy rains accompanied with gusty winds & hailstorms likely over NI Karnataka districts

Scattered very light to moderate thundershowers likely over Malenadu districts#KarnatakaRains
— Karnataka Weather (@Bnglrweatherman) April 8, 2023

ಈ ಪೈಕಿ ಏಪ್ರಿಲ್ 8 ರಂದು ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ,ಧಾರವಾಡ, ಹಾವೇರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದಷ್ಟು ಕಡೆಗಳಲ್ಲಿ ಮಳೆಯಾಗಲಿದೆ.

ಇದರೊಂದಿಗೆ ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

LEAVE A REPLY

Please enter your comment!
Please enter your name here