ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಶುರುವಾಗಿದೆ ಎಂದರು.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಡ್ ಶೆಡ್ಡಿಂಗ್ ನಿಂದ ರೈತರು ಕಂಗಲಾಗಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ಬರಗಾಲ ಇರುವುದರಿಂದ ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಉತ್ಪಾದನೆ ಕಡಿಮೆ ಇರುವುದರಿಂದ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ ಎಂದು ಹೇಳಿದರು.
ಹಾಗೆ 10,000 ಎಕರೆಯಲ್ಲಿ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಪ್ಲ್ಯಾನ್ ಇದೆ. ಈಗಾಗಲೇ ಇಂಧನ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಸೆಂಟ್ರಲ್ ಗ್ರಿಡ್ನಿಂದ ವಿದ್ಯುತ್ ಕೊಟ್ಟರೇ ನಮಗೆ ಅನುಕೂಲ ಆಗುತ್ತೆ ಎಂದು ಸ್ಪಷ್ಟಪಡಿಸಿದರು.
ಕಳೆದ ಎರಡುಮೂರು ವರ್ಷದಿಂದ ಏನೂ ಮಾಡಿಲ್ಲ ವಿದ್ಯುತ್ ಉತ್ಪಾದನೆ ಬಗ್ಗೆ ಏನೂ ಮಾಡಿಲ್ಲ ಅದರ ಬಗ್ಗೆ ಮೊದಲು ಬಿಜೆಪಿಯವರು ಹೇಳಲಿ ಎಂದು ಹೇಳಿದರು.
The post ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್: ಪರೋಕ್ಷವಾಗಿ ಶೆಡ್ಡಿಂಗ್ ಬಗ್ಗೆ ಸತ್ಯ ಒಪ್ಪಿಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್! appeared first on Ain Live News.