ಬೆಂಗಳೂರು:
ಬಹುಚರ್ಚಿತ ವಿಷಯವಾಗಿರುವ ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತಂತೆ ಶಿಕ್ಷಣ ಇಲಾಖೆ ವಿವಿಧ ಸ್ತರಗಳಲ್ಲಿ ಸಮಾಲೋಚನೆ-ಸಂವಾದಗಳನ್ನು ಕೈಗೊಂಡಿದ್ದು,ಮುಖ್ಯಮಂತ್ರಿಗಳಿಗೆ ರಾಜ್ಯದ ಸ್ಥಿತಿಗತಿಗಳನ್ನು ಮನದಟ್ಟು ಮಾಡಿದ ನಂತರವೇ ಆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ,ಪ್ರಾಥಮಿಕ ಶಿಕ್ಷಣ ಇಲಾ ಖೆ ಕಾರ್ಯದರ್ಶಿ,ಸಾಶಿಇ ಆಯುಕ್ತರು,ನಿರ್ದೇಶಕರುಗಳು,ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು,ಪ್ರಾಥ ಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ನಂತರ ತಮ್ಮನ್ನು ಭೇಟಿಯಾ ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಕ್ಕಳ ಹಿತ ಹಾಗೂ ಮಕ್ಕಳ ಆರೋಗ್ಯವೇ ಪ್ರಧಾನವಾಗಿರುವು ದರಿಂದ ಶಾಲೆಗಳನ್ನು ತಕ್ಷಣದಲ್ಲೇ ಆರಂಭಿಸುವ ಉದ್ದೇಶವಿಲ್ಲವಾದರೂ,ಮಕ್ಕಳು ಶಾಲೆಯಿಂದ ಬಹುಕಾಲ ಹೊರಗುಳಿಯುವುದರಿಂದಾಗುವ ಸಮಸ್ಯೆಗಳ ಕುರಿತೂ ಚಿಂತಿಸ ಬೇಕಾದ ಅಗತ್ಯವಿದೆ ಎಂದರು.