ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿ ಉತ್ಸುಕವಾಗಿರುವ ಉದ್ದೇಶಿತ ಯೋಜನೆಗಳ ಬಗ್ಗೆ ಆಪಲ್‌ನ ಪ್ರಮುಖ ಐಫೋನ್ ಅಸೆಂಬ್ಲರ್ ಆಗಿರುವ ತೈವಾನ್‌ನ ಫಾಕ್ಸ್‌ಕಾನ್ ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರವು ‘ಫಲಪ್ರದ’ ಚರ್ಚೆ ನಡೆಸಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಹೇಳಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿ ಉತ್ಸುಕವಾಗಿರುವ ಉದ್ದೇಶಿತ ಯೋಜನೆಗಳ ಬಗ್ಗೆ ಆಪಲ್‌ನ ಪ್ರಮುಖ ಐಫೋನ್ ಅಸೆಂಬ್ಲರ್ ಆಗಿರುವ ತೈವಾನ್‌ನ ಫಾಕ್ಸ್‌ಕಾನ್ ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರವು ‘ಫಲಪ್ರದ’ ಚರ್ಚೆ ನಡೆಸಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಹೇಳಿದ್ದಾರೆ.
ಸಭೆಯಲ್ಲಿ ಎಂಬಿ ಪಾಟೀಲ್, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಚೆನ್ನೈನ ಖಾಸಗಿ ಹೋಟೆಲ್‌ನಲ್ಲಿ ನಡೆದ ಚರ್ಚೆಯಲ್ಲಿ ಉಪಸ್ಥಿತರಿದ್ದರು ಎಂದು ಕೈಗಾರಿಕಾ ಸಚಿವರ ಕಚೇರಿ ಹೇಳಿಕೆ ತಿಳಿಸಿದೆ.
ಸಚಿವ ಎಂಬಿ ಪಾಟೀಲ್ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಹೂಡಿಕೆ ನೀತಿಗಳು ಕೈಗಾರಿಕೆಗಳ ಬೆಳವಣಿಗೆಗೆ ಅನುಕೂಲವಾಗುವ ಪರಿಸರ ವ್ಯವಸ್ಥೆಯನ್ನು ಪೋಷಿಸಲು ಸಹಕಾರಿಯಾಗಿದೆ ಎಂದರು.
ಇದನ್ನೂ ಓದಿ: ಕಾನೂನು ತೊಡಕು ನಿವಾರಣೆ; ಶೀಘ್ರದಲ್ಲೇ ಫಾಕ್ಸ್ ಕಾನ್ ಗೆ ಭೂಮಿ ಹಸ್ತಾಂತರ: ಎಂಬಿ ಪಾಟೀಲ್
ಚರ್ಚೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಸಚಿವರು, ಕಂಪನಿ ಅಧ್ಯಕ್ಷರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದೆ ಎಂದರು.
ಸಭೆಯಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.