ಬೆಂಗಳೂರು:
ಕೋವಿಡ್ ಲಸಿಕೆ ಕುರಿತು ದೇಶಾದ್ಯಂತ ವಿವಿಧ ರಾಜಕೀಯ ಪಕ್ಷಗಳ ನಡುವೆ ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ಒದಗಿಸುವುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19 ಗೆ ಲಸಿಕೆ ಸಿದ್ಧಪಡಿಸುವ ಪ್ರಕ್ರಿಯೆ ವ್ಯವಸ್ಥಿತವಾಗಿ ಸಾಗಿದ್ದು, ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಪ್ರಥಮ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಒದಗಿಸಲಾಗುವುದು ಎಂದಿದ್ದಾರೆ.
ಆರೋಗ್ಯ ಕಾರ್ಯಕರ್ತರ ನಂತರ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕಾಗಿ ಸರ್ಕಾರ ಸೂಕ್ತ ಕಾರ್ಯಯೋಜನೆ ರೂಪಿಸಿದೆ ಎಂದು ಹೇಳಿದ್ದಾರೆ.