ಸರ್ಕಾರವು ರಾಜ್ಯ ಬಜೆಟ್‌ನಲ್ಲಿ ಸಂಶೋಧನೆಗೆ ವಿಶೇಷ ಗಮನವನ್ನು ನೀಡಿದೆ, ಜೊತೆಗೆ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕರನ್ನು ಉತ್ತೇಜಿಸವ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರು: ಸರ್ಕಾರವು ರಾಜ್ಯ ಬಜೆಟ್‌ನಲ್ಲಿ ಸಂಶೋಧನೆಗೆ ವಿಶೇಷ ಗಮನವನ್ನು ನೀಡಿದೆ, ಜೊತೆಗೆ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕರನ್ನು ಉತ್ತೇಜಿಸವ ಕ್ರಮಗಳನ್ನು ಕೈಗೊಂಡಿದೆ.
ಶುಕ್ರವಾರ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯುವ ನೀತಿ 2022ರ ಪ್ರಕಾರ, ವಿಶೇಷವಾಗಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲಾಗುವುದು. ಇದನ್ನು ಉತ್ತೇಜಿಸುವ ಸಲುವಾಗಿ 5 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುವುದು, ಅದರಲ್ಲಿ 1 ಲಕ್ಷ ರೂನ್ನು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಹೇಳಿದರು.
ಜೊತೆಗೆ, ಕರ್ನಾಟಕ ಸಂಶೋಧನೆ ಅಭಿವೃದ್ಧಿ ಮತ್ತು ನಾವೀನ್ಯತೆ ನೀತಿಯನ್ನು ಮತ್ತಷ್ಟು ಹೆಚ್ಚಿಸಿ, ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಉತ್ತೇಜಿಸಲು, ಎಲ್ಲಾ ಮಧ್ಯಸ್ಥಗಾರರ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಜ್ಯದಲ್ಲಿ ಆರ್ & ಡಿ ಚಟುವಟಿಕೆಗಳನ್ನು ಕೈಗೊಳ್ಳಲು ಅಂತರ-ಇಲಾಖೆಯ ಸಮನ್ವಯವನ್ನು ಸಾಧಿಸಲು ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.