ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಇಂದು (ಜ.21) ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೊದಲ ಮೈತ್ರಿ ಸಭೆ ಮಾಡಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಿ.ಎನ್.ಅಶ್ವತ್ಥನಾರಾಯಣ ಹಾಗೂಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ವಿಧಾನ ಪರಿಷತ್ ಸದಸ್ಯರಾದ ಭೋಜೆಗೌಡ, ಕೆ.ಎ. ತಿಪ್ಪೇಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.