ಶಿವಮೊಗ್ಗ :ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯುವ ನಿಧಿಗೆ ಶುಕ್ರವಾರ ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ನಗರದ ಫ್ರೀಡಂ ಪಾರ್ಕ್ ನಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಉಸತುವಾರಿ ಸಚಿವ ಮಧು ಬಂಗಾರಪ್ಪ ಸಹಿತ ಹಲವು ಸಚಿವರು ಭಾಗವಹಿಸಿದ್ದರು.
2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.
ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ 3000 ರೂ.ಮತ್ತು ಡಿಪ್ಲೋಮಾ ಮುಗಿಸಿದವರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ತೆ ನೀಡಲಾಗುತ್ತದೆ. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.