ರಾಮ್ ಚರಣ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ರಾಜ್ ಕುಮಾರ್ ಹಿರಾನಿ
ಬಾಲಿವುಡ್ ನ ಖ್ಯಾತ ನಿರ್ದೇಶಕ ರಾಜ್ ಕುಮಾರ್ ಹಿರಾನಿ (Rajkumar Hirani) ಇದೀಗ ದಕ್ಷಿಣದ ನಟರತ್ತ ತಮ್ಮ ದೃಷ್ಟಿ ಬೀರಿದ್ದಾರೆ. ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ಅವರಿಗಾಗಿ ಹಿರಾನಿ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಮ್ ಚರಣ್ ಜೊತೆ ಹಿರಾನಿ ಮಾತುಕತೆ ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.
ರಾಮ್ ಚರಣ್ ಮತ್ತು ರಾಜ್ ಕುಮಾರ್ ಹಿರಾನಿ ಸಿನಿಮಾ ಮಾಡಲಿದ್ದಾರೆ ಎಂದು ಒಂದು ಕಡೆ ಸುದ್ದಿಯಾದರೆ, ಅಂತಹ ಯಾವುದೇ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ ರಾಮ್ ಚರಣ್ ಆಪ್ತರು. ಸದ್ಯ ಅಂತಹ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲ ಸುದ್ದಿ ಹರಿದಾಡುತ್ತಿದ್ದರೂ ಈ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
The post ರಾಮ್ ಚರಣ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ರಾಜ್ ಕುಮಾರ್ ಹಿರಾನಿ appeared first on Ain Live News.