Home ರಾಜಕೀಯ ರಾಹುಲ್ ಗಾಂಧಿ ರಾಜ್ಯ ಭೇಟಿಯಿಂದ ಯಾವುದೇ ಪರಿಣಾಮವಿಲ್ಲ; ಸಿಎಂ ಬೊಮ್ಮಾಯಿ

ರಾಹುಲ್ ಗಾಂಧಿ ರಾಜ್ಯ ಭೇಟಿಯಿಂದ ಯಾವುದೇ ಪರಿಣಾಮವಿಲ್ಲ; ಸಿಎಂ ಬೊಮ್ಮಾಯಿ

28
0
Bommai at Hubli

ಹುಬ್ಬಳ್ಳಿ:

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯಕ್ಕೆ ಭೇಟಿ ನೀಡುವುದರಿಂದ ಯಾವುದೇ ಪರಿಣಾಮಗಳಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಾವುದೇ ಪರಿಣಾಮ ಬೀರಲಿಲ್ಲ. ಅವರ ಇತ್ತೀಚಿನ ಬೆಳಗಾವಿ ಭೇಟಿ ಕೂಡ ರಾಜ್ಯ ರಾಜಕಾರಣದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಿಲ್ಲ. ನಿನ್ನೆಯ ಅವರ ಬೋಗಸ್ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ. ಅವರು ಕಳೆದ ಬಾರಿ ಬಂದದ್ದಕ್ಕೂ ಈ ಬಾರಿ ಬಂದಿರುವುದಕ್ಕೂ ಬಹಳ ವ್ಯತ್ಯಾಸವಿದೆ. ಲಂಡನ್ ವಿಶ್ವವಿದ್ಯಾಲಯದಲ್ಲಿ ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ಇಡೀ ದೇಶ್ಯದಲ್ಲಿ ಹಾಗೂ ರಾಜ್ಯದಲ್ಲಿ ಈ ಬಗ್ಗೆ ಖಂಡನೆಯಾಗಿದೆ. ಅವರ ಮಾತಿಗೆ ಯಾವುದೇ ಬೆಲೆಯನ್ನು ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

ಸಿದ್ದರಾಮಯ್ಯ ಅವರು ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿ ಆಶ್ವಾಸನೆಗಳನ್ನು ನೀಡಿದ್ದು, ಇಂದಿಗೂ ಈಡೇರಿಸಿಲ್ಲ. ಇದು ಅವರ ಟ್ರ್ಯಾಕ್ ರೆಕಾರ್ಡ್ . ರಾಜಸ್ಥಾನ, ಛತ್ತೀಸ್ ಗಡದಲ್ಲಿ ಘೋಷಣೆ ಮಾಡಿದ್ದನ್ನು ಅವರು ಈಡೇರಿಸಿಲ್ಲ ಎಂದರು. ಛತ್ತೀಸ್ ಗಡದಲ್ಲಿ ಪ್ರತಿ ಮನೆಗೆ ಒಂದು ಸಾವಿರ ರೂ ನೀಡುವುದಾಗಿ ಹೇಳಿದ್ದರು. ನಾಲ್ಕು ವರ್ಷ ನೀಡಿದೆ, ಕೊನೆ ವರ್ಷ ಕೊಡಲು ಓಡಾಡಿದರು. ಈ ರೀತಿ ಜನರನ್ನು ಯಾಮಾರಿಸುತ್ತಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಬರೀ ವಿಸಿಟಿಂಗ್ ಕಾರ್ಡ್ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ ಹಾಗೂ ರೀಡೂ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭ್ರಷ್ಟಾಚಾರದ ಆರೋಪವಿದೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆಂದರೆ ಇದ್ದಲು ಮಸಿಗೆ ಬುದ್ಧಿ ಹೇಳಿದಂತೆ ಎಂದರು. ಕಾಂಗ್ರೆಸ್ ಅಧ:ಪತನಕ್ಕೆ ಸಿದ್ಧವಾಗಿದೆ. ಭಾರತ ದೇಶದಲ್ಲಿ ಎಲ್ಲಾ ಕಡೆ ಪಾತನವಾಗಿದೆ ಎಂದರು.

ಸಿದ್ದರಾಮಯ್ಯ ಅವರ ಸರ್ಕಾರದ 59 ಭ್ರಷ್ಟಾಚಾರ ಪ್ರಕರಣ ಗಳ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗಿತ್ತಿದೆ. ಕೆಲವೇ ದಿನಗಳಲ್ಲಿ ತೀರ್ಮಾನವಾಗುತ್ತದೆ ಎಂದರು. 59 ಪ್ರಕರಣಗಳಲ್ಲಿ ಕೆಲವನ್ನು ವಹಿಸಲಾಗಿದೆ. ಬಾಕಿ ಇರುವುದನ್ನು ವಹಿಸಲಾಗುವುದು ಎಂದರು.

ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ: ಉರಿಗೌಡ , ನಂಜೇಗೌಡ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಉತ್ತರಿಸಿ, ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ. ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ ಎಂದರು.

ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರ ವಹಿಸಿದ್ದರು ಎನ್ನುವುದು ಜಗಜ್ಜಾಹೀರಾಗಿದೆ. ಸತ್ಯವನ್ನು ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲ.

ಗುರ್ಮಿಟ್ಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ: ಬಾಬು ರಾವ್ ಚಿಂಚನಸೂರ ಅವರು ಕಾಂಗ್ರೆಸ್ ನಲ್ಲಿದ್ದವರು, ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಆ ಕ್ಷೇತ್ರದಲ್ಲಿ ನಮ ಸಂಘಟನೆ ಉತ್ತಮವಾಗಿದೆ. ಗುರ್ಮಿಟ್ಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾರಿಗೆ ನೌಕರರ ಸಂಘದವರು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

LEAVE A REPLY

Please enter your comment!
Please enter your name here