Home Uncategorized ರೂಪಾ- ರೋಹಿಣಿಗೆ ಬುದ್ಧಿ ಹೇಳಿ: ಪ್ರಧಾನಿ ಮೋದಿ, ಅಮಿತ್ ಶಾಗೆ ಜಗ್ಗೇಶ್ ಮನವಿ

ರೂಪಾ- ರೋಹಿಣಿಗೆ ಬುದ್ಧಿ ಹೇಳಿ: ಪ್ರಧಾನಿ ಮೋದಿ, ಅಮಿತ್ ಶಾಗೆ ಜಗ್ಗೇಶ್ ಮನವಿ

29
0

ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಬಹಿರಂಗವಾಗಿ ಕಿತ್ತಾಡಿಕೊಳ್ಳುತ್ತಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಬಹಿರಂಗವಾಗಿ ಕಿತ್ತಾಡಿಕೊಳ್ಳುತ್ತಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು, ಐಪಿಎಸ್ ಮತ್ತು ಐಎಎಸ್ ಎರಡೂ ಹುದ್ದೆಗಳು ಜನರಿಗೆ ಮಾರ್ಗದರ್ಶನ ನೀಡುವ ಅತ್ಯಂತ ಜವಾಬ್ದಾರಿ ಸ್ಥಾನಗಳಾಗಿವೆ. ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತೆ ಕೆಲಸ ಮಾಡುತ್ತವೆ. ವೈಯಕ್ತಿಕ ದ್ವೇಷವನ್ನು ಮಾಧ್ಯಮಗಳ ಮುಂದೆ ತರಬಾರದು. ಸಾರ್ವಜನಿಕವಾಗಿ ಘನತೆಯನ್ನು ಕಾಪಾಡಿಕೊಳ್ಳಲು ಐಪಿಎಸ್ ಅಧಿಕಾರಿ ಡಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುದ್ಧಿ ಹೇಳಬೇಕು ಎಂದು ವಿನಂತಿಸುವುದಾಗಿ ಹೇಳಿದ್ದಾರೆ. ಅಲ್ಲದೆ ತಮ್ಮ ಟ್ವೀಟ್ ಅನ್ನು ಮೋದಿ ಮತ್ತು ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನು ಓದಿ: ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಮುಜುಗರ ಉಂಟುಮಾಡಬೇಡಿ: ರೂಪಾ v/s ಸಿಂಧೂರಿಗೆ ಸರ್ಕಾರದ ಆದೇಶ

ಮಹಿಳಾ ಅಧಿಕಾರಿಗಳ ನಡುವಿನ ಬಹಿರಂಗ ಸಂಘರ್ಷ ಮುಂದುವರೆದಿದ್ದು, ಬಹಿರಂಗವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ರಾಜ್ಯ ಸರ್ಕಾರ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿ ಅವರಿಗೆ ಸೂಚನೆ ನೀಡಿದೆ. 

IPS & IAS are responsible
posts to guide people & work for government as a bridge! There should be no personal vendetta on media.
I request @narendramodi ji @AmitShah ji to advice @D_Roopa_IPS #rohinisindhuri IAS officials to maintain their dignity in public!
— ನವರಸನಾಯಕ ಜಗ್ಗೇಶ್ (@Jaggesh2) February 20, 2023

LEAVE A REPLY

Please enter your comment!
Please enter your name here