Home ಕರ್ನಾಟಕ ರೇಣುಕಾಸ್ವಾಮಿ ಕೊಲೆ ಪ್ರಕರಣ | ಅನ್ನಪೂರ್ಣೇಶ್ವರಿನಗರ ಠಾಣೆಯ ಸುತ್ತ ನಿಷೇದಾಜ್ಞೆ ಜಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣ | ಅನ್ನಪೂರ್ಣೇಶ್ವರಿನಗರ ಠಾಣೆಯ ಸುತ್ತ ನಿಷೇದಾಜ್ಞೆ ಜಾರಿ

13
0

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳ ತನಿಖೆ ನಡೆಯುತ್ತಿದ್ದು, ಠಾಣೆ ಬಳಿ ಗುಂಪು ಸೇರುವುದನ್ನು ನಿಯಂತ್ರಿಸಲು ಠಾಣೆ ಸುತ್ತ 200 ಮೀಟರ್ ಪ್ರದೇಶದಲ್ಲಿ ಐದು ದಿನಗಳ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ದರ್ಶನ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ಘೋಷಣೆ ಕೂಗುವ, ಗಲಾಟೆ ಮಾಡುವ ಸಂಭವವಿರುವುದರಿಂದ ತನಿಖೆಯ ಮೇಲೆ ಪರಿಣಾಮ ಬೀರದಂತೆ ತಡೆಯಲು ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಠಾಣೆಯ ಬಳಿ ಸೇರಬಾರದು, ಮೆರವಣಿಗೆ ಮತ್ತು ಸಭೆಗಳನ್ನು ನಡೆಸಬಾರದು, ದೊಣ್ಣೆ, ಕತ್ತಿ ಸೇರಿದಂತೆ ಯಾವುದೇ ಮಾರಕಾಸ್ತ್ರಗಳು ಅಥವಾ ದೈಹಿಕ ಹಿಂಸೆ ಮಾಡುವ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಯಾವುದೇ ಸ್ಪೋಟಕ ವಸ್ತು ಸಿಡಿಸುವುದು, ಕಲ್ಲು ಕ್ಷಿಪಣಿ ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ. ವ್ಯಕ್ತಿ ಅಥವಾ ಶವಗಳ ಪ್ರತಿಕೃತಿ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಭಿತ್ತಿಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿ ಆಯುಕ್ತರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here