ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳ ಪೊಲೀಸರ ವಿಚಾರಣಾ ಅವಧಿ ಇಂದು(ಜೂನ್ 20) ಅಂತ್ಯವಾದ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ಪೊಲೀಸರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಕೋರ್ಟ್ ಮೂರನೇ ಬಾರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರೆ, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.