Home Uncategorized ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಿರಿ: ಕೆಎಂಎಫ್'ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಿರಿ: ಕೆಎಂಎಫ್'ಗೆ ಸಿಎಂ ಸಿದ್ದರಾಮಯ್ಯ ಸೂಚನೆ

24
0

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್‌)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್‌)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇತ್ತೀಚಿಗೆ ಮನ್ಮುಲ್ ಮತ್ತು ಬಮುಲ್ ರೈತರಿಗೆ ನೀಡುತ್ತಿದ್ದ ಹಾಲಿನ ಪ್ರೋತ್ಸಾಹಧನವನ್ನು ಕಡಿಮೆ ಮಾಡಿತ್ತು. ಈ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದು, ಮಾಹಿತಿ ತಿಳಿದ ಮುಖ್ಯಮಂತ್ರಿಗಳು ಕೆಎಂಎಫ್​ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರವನ್ನು ಕಡಿತ ಮಾಡದಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು. ಹಾಲಿನ ಪ್ರೋತ್ಸಾಹಧನ ಕಡಿತ ಮಾಡಿದರೇ ರೈತರಿಗೆ ತೊಂದರೆಯಾಗುತ್ತೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ್ದರಿಂದ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ಏಪ್ರಿಲ್‌ 1ರಿಂದ ಮೇ 31ರವರೆಗೆ ಪ್ರತಿ ಲೀಟರ್‌ ಹಾಲಿಗೆ ರೂ.2.85 ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು.

ಇದೀಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವು ಲಭ್ಯವಾಗಿದ್ದು, ಹಾಲಿ ಉತ್ಪಾದನೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಪ್ರೋತ್ಸಾಹಧನದಲ್ಲಿ ರೂ.1.50 ಕಡಿತಗೊಳಿಸಿ ಆದೇಶ ಹೊರಡಿಸಲಾಗಿತ್ತು.

LEAVE A REPLY

Please enter your comment!
Please enter your name here