Home Uncategorized ರೈತರಿಗೆ ಶಾಕ್: ಹಾಲಿನ ಪ್ರೋತ್ಸಾಹ ಧನ ಪ್ರತಿ ಲೀಟರ್​ಗೆ 1.50 ರೂ. ಕಡಿತ

ರೈತರಿಗೆ ಶಾಕ್: ಹಾಲಿನ ಪ್ರೋತ್ಸಾಹ ಧನ ಪ್ರತಿ ಲೀಟರ್​ಗೆ 1.50 ರೂ. ಕಡಿತ

12
0

ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ ವರೆಗೆ  ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 1.50 ರೂಪಾಯಿ ಕಡಿತಗೊಳಿಸಿ ಆದೇಶಿಸಿದೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಹಾಲು’ ಘೋಷಣೆ ಕೂಗಲು ಬಿಜೆಪಿಗೆ ಕಾಂಗ್ರೆಸ್ ಬಿಡುವುದಿಲ್ಲ: ಅಮುಲ್-ನಂದಿನಿ ವಿಚಾರವಾಗಿ ಜೈರಾಮ್ ರಮೇಶ್

ಸದ್ಯ, ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಜಾಸ್ತಿಯಾಗಿದ್ದು, ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ. ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು, ಈಗ 16 ಲಕ್ಷ ಲೀಟರ್​ಗೆ ಉತ್ಪಾದನೆಯಾಗುತ್ತಿದೆ. ದಿನಕ್ಕೆ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದ್ದು, ಹಾಗಾಗಿ ಪ್ರೋತ್ಸಾಹ ಧನ ಕಡಿತಗೊಳಿಸಿ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here