ಲುಧಿಯಾನ: ಪಂಜಾಬ್‌ನ ಲುಧಿಯಾನದ ಖನ್ನ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್‌ನಲ್ಲಿ ಇಂಧನ ಟ್ಯಾಂಕರ್ ಒಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಸ್ಥಳದ ತುಂಬೆಲ್ಲಾ ಬೆಂಕಿಯ ಜ್ವಾಲೆಗಳು ಹಾಗೂ ದಟ್ಟ ಹೊಗೆ ಆವರಿಸಿದೆ. ವಾಹನ ಸಂಚಾರಕ್ಕೂ ಅಡಚಣೆಯಾಗಿದ್ದು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಈ ಇಂಧನ ಟ್ಯಾಂಕರ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಬೆಂಕಿ ಹತ್ತಿಕೊಂಡಿದೆ. ಈ ಅವಘಡದಲ್ಲಿ ಯಾರಿಗಾದರೂ ಗಾಯಗಳಾಗಿವೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.