Home ಕರ್ನಾಟಕ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್‌ ರೇವಣ್ಣ ಬಂಧನ

ಲೈಂಗಿಕ ದೌರ್ಜನ್ಯ ಆರೋಪ: ಸೂರಜ್‌ ರೇವಣ್ಣ ಬಂಧನ

35
0

ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ರೇವಣ್ಣ ಅವರ ಬಂಧನವಾಗಿರುವ ಬಗ್ಗೆ ವರದಿಯಾಗಿದೆ.

ಶನಿವಾರ ರಾತ್ರಿಯಿಂದ ಸಿಇಎನ್ ಠಾಣೆಯಲ್ಲಿ ಸೂರಜ್ ಅವರನ್ನು ವಿಚಾರಣೆಗೊಳಪಡಿಸಿದ್ದ ತನಿಖಾಧಿಕಾರಿ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಅವರು ಆರೋಪಿಯನ್ನು ಬಂಧಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಂದೆಡೆ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿರುವಾಗಲೇ ಅವರ ಅಣ್ಣ ಡಾ.ಸೂರಜ್ ಬಂಧನವಾಗಿದ್ದು ರೇವಣ್ಣ ಅವರ ಇಬ್ಬರು ಪುತ್ರರೂ ಗಂಭೀರ ಅಪರಾಧ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರುವಂತಾಗಿದೆ.

LEAVE A REPLY

Please enter your comment!
Please enter your name here