Home ಕರ್ನಾಟಕ ಲೈಂಗಿಕ ದೌರ್ಜನ್ಯ ಪ್ರಕರಣ | ಜುಲೈ 1ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಗೆ

ಲೈಂಗಿಕ ದೌರ್ಜನ್ಯ ಪ್ರಕರಣ | ಜುಲೈ 1ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಗೆ

21
0

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಅವರನ್ನು ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿ ಸೋಮವಾರ ನ್ಯಾಯಾಲಯ ಆದೇಶ ನೀಡಿದೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಸೂರಜ್ ರೇವಣ್ಣ ಅವರನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ಒಪ್ಪಿಸಿ ಜನಪ್ರತಿನಿದಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಏನಿದು ಪ್ರಕರಣ :

ಜೂ.22ರಂದು ಇಲ್ಲಿನ ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ಬಂದ ಸಂತ್ರಸ್ತ ಯುವಕನೋರ್ವ, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಅನಂತರ, ಸೂರಜ್ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 377, 342, 506, 34ರ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸೆನ್ ಪೊಲೀಸ್ ಠಾಣೆಗೆ ಬಂದಿದ್ದ ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು, ವಿಚಾರಣೆಗೊಳಪಡಿಸಿದರು. ಬಳಿಕ ಹೇಳಿಕೆ ದಾಖಲಿಸಿಕೊಂಡು ಸೂರಜ್ ರೇವಣ್ಣ ಅವರನ್ನು, ಪೊಲೀಸರು ಜೂ.23ರ ರವಿವಾರ ಬೆಳಗ್ಗೆ ಬಂಧಿಸಿದ್ದರು.

LEAVE A REPLY

Please enter your comment!
Please enter your name here