Home ಕರ್ನಾಟಕ ಲೈಂಗಿಕ ಹಗರಣ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆ

ಲೈಂಗಿಕ ಹಗರಣ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆ

3
0

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಓರ್ವ ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.

ಇಂದು ಎಸ್ ಐಟಿ ಅಧಿಕಾರಿಗಳ ತಂಡ ಓರ್ವ ಸಂತ್ರಸ್ತ ಮಹಿಳೆಯನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಮುಂದೆ ಸಂತ್ರಸ್ತ ಮಹಿಳೆಯು ಘಟನೆ ಸಂಬಂಧ 164 ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್.​ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದು, ಈ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್  ನಾಳೆಗೆ ಮುಂದೂಡಿದೆ. ಅಲ್ಲದೆ, ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ಸೂಚಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.

LEAVE A REPLY

Please enter your comment!
Please enter your name here