ಲೈಂಗಿಕ ಹಗರಣ | ವಿದೇಶಾಂಗ ಸಚಿವಾಲಯದಿಂದ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ : ವರದಿ
ಹೊಸದಿಲ್ಲಿ: ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಸಂಬಂಧ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು India Today ವರದಿ ಮಾಡಿದೆ.
ಲೈಂಗಿಕ ಹಗರಣ ಸಂಬಂಧ ಈಗಾಗಲೇ ರಾಜ್ಯ ಸರಕಾರ ಎಸ್ಐಟಿ ರಚನೆ ಮಾಡಿದ್ದು, ಪ್ರಜ್ವಲ್ ರೇವಣ್ಣ ಪತ್ತೆಗೆ ಲುಕ್ ಔಟ್, ಬ್ಲೂ ಕಾರ್ನರ್ ನೋಟಿಸ್ ನೀಡಿದ್ದರೂ ಪ್ರಕರಣ ಆರೋಪಿ ಈವರೆಗೆ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸೆರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದರು. ಇದರ ಬೆನ್ನಲೇ ಕೇಂದ್ರ ವಿದೇಶಾಂಗ ಸಚಿವಾಲಯವು ಆರೋಪಿ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
