Home ಕರ್ನಾಟಕ ಲೋಕಸಭಾ ಚುನಾವಣೆ: ಮತದಾನ ದಿನದಂದು ಸಾರ್ವತ್ರಿಕ ರಜೆ

ಲೋಕಸಭಾ ಚುನಾವಣೆ: ಮತದಾನ ದಿನದಂದು ಸಾರ್ವತ್ರಿಕ ರಜೆ

17
0

ಉಡುಪಿ, ಎ.1: 2024ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಎಪ್ರಿಲ್ 26ರಂದು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ 118-ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಈ ಎಲ್ಲಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಮತದಾರರು ತಮ್ಮ ಮತಗಳನ್ನು ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರಕಾರಿ ಕಚೇರಿ ಗಳಿಗೆ, ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲ ವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪನಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ಘೋಷಿಸಲಾಗಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಚುನಾವಣಾದಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here