ಹೊಸದಿಲ್ಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ವಿರೋಧ ಪಕ್ಷಗಳ ನಾಯಕರ ಸಭೆಯ ನಂತರ ಘೋಷಿಸಿದ್ದಾರೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ತಿಳಿಸಿದ್ದಾರೆ. ಉಳಿದ ಪಧಾದಿಕಾರಿಗಳನ್ನು ಬಳಿಕ ಆಯ್ಕೆ ಮಾಡಲಾಗುವುದು ಎಂದು ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.