Home Uncategorized ಲೋಕಾಯುಕ್ತ ದಾಳಿಯಲ್ಲಿ ಬೆಸ್ಕಾಂ ಎಂಜಿನಿಯರ್‌ನ ಮನೆಯಲ್ಲಿ 5.6 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಲೋಕಾಯುಕ್ತ ದಾಳಿಯಲ್ಲಿ ಬೆಸ್ಕಾಂ ಎಂಜಿನಿಯರ್‌ನ ಮನೆಯಲ್ಲಿ 5.6 ಕೋಟಿ ಮೌಲ್ಯದ ಆಸ್ತಿ ಜಪ್ತಿ

15
0

ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್ ಅವರ ನಾಲ್ಕು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ದಾಳಿ ವೇಳೆ ಸುಮಾರು 1.4 ಕೋಟಿ ಮೌಲ್ಯದ ದ್ವಿಚಕ್ರ ವಾಹನ ಮತ್ತು ಮೂರು ಕಾರು, ಚಿನ್ನ, ಬೆಳ್ಳಿ, ಷೇರುಗಳು, ವಿಸ್ಕಿ ಬಾಟಲಿಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಸರ್ಕಾರಿ ಅಧಿಕಾರಿಯು ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಇಂಡಸ್ಟ್ರಿಯಲ್ ಏರಿಯಾದಲ್ಲಿ 4.2 ಕೋಟಿ ರೂಪಾಯಿ ಮೌಲ್ಯದ ಆಸ್ತಿ, ದೋಬಸ್‌ಪೇಟೆಯಲ್ಲಿ 0.75 ಎಕರೆ ಪ್ಲಾಟ್ ಮತ್ತು ಬಸವೇಶ್ವರನಗರದ ಬಿಇಎಂಎಲ್ ಲೇಔಟ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯನ್ನು ಸಹ ಹೊಂದಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಒಟ್ಟು ಆಸ್ತಿ ಮೌಲ್ಯ 5.6 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳ ಬೇಟೆ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ; ಮನೆ, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ 

ಇದೇ ವೇಳೆ, ಇಂಡಸ್ಟ್ರೀಸ್ ಆ್ಯಂಡ್​​​​ ಬಾಯ್ಲರ್ಸ್ ಇಲಾಖೆಯ ಉಪ ನಿರ್ದೇಶಕ ಟಿ.ವಿ ನಾರಾಯಣಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ 2,58,76,000 ಮೌಲ್ಯದ ಆಸ್ತಿ, 22.55 ಲಕ್ಷ ಮೌಲ್ಯದ 2 ಬೈಕ್​​, ಚಿನ್ನಾಭರಣ, ಬೆಳ್ಳಿ ವಸ್ತುಗಳು ಪತ್ತೆಯಾಗಿವೆ. 10 ಎಕರೆ ಕೃಷಿ ಭೂಮಿ, 3 ಮನೆಗಳು, ಗೃಹೋಪಯೋಗಿ ವಸ್ತು, 2 ಕೋಟಿ 36 ಲಕ್ಷದ 26 ಸಾವಿರ ಮೌಲ್ಯದ ಒಂದು ಸೈಟ್, ಬೆಂಗಳೂರಿನ ವಿಜಯನಗರ, ಕೆ.ಆರ್.ಪುರಂನಲ್ಲಿರುವ ಮನೆ, ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಕೃಷಿ ಜಮೀನು ಹೊಂದಿದ್ದಾರೆ.

LEAVE A REPLY

Please enter your comment!
Please enter your name here