Home Uncategorized ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

39
0

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತು ಸರಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಕೂಡಲೆ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು.

ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು. ಜನತೆಗೆ ತಪ್ಪು ಸಂದೇಶ ಹೋಗಬಾರದು. ಆದುದರಿಂದ, ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here