Home Uncategorized ವರದಿ ಕೊಡುವ ಮುನ್ನವೇ ವಿರೋಧವೇಕೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ವರದಿ ಕೊಡುವ ಮುನ್ನವೇ ವಿರೋಧವೇಕೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

19
0

 ಬೆಂಗಳೂರು: ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ  ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಇಂದು ಮಾಧ್ಯಮದವರೊಂದಿಗೆ  ಮಾತನಾಡಿದರ ಸಿಎಂ, “ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ವರದಿ ನೀಡಿದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು”ಎಂದು ಪ್ರತಿಕ್ರಿಯಿಸಿದರು.

ಮೂಲಪ್ರತಿ ಕಾಣೆಯಾಗಿದೆ ಎಂದು   ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಈ ಬಗ್ಗೆ ನನಗೆ ತಿಳಿದಿಲ್ಲ, ಅವರು ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ” ಎಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ. 162 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ  ಸಂಶಯ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ .  ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಡಿಸೆಂಬರ್ ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ಸಿದ್ದರಾಮಯ್ಯ “ಡಿಸಿಎಂ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ”ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.

ನಿಗಮಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿ ಸಿಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.

LEAVE A REPLY

Please enter your comment!
Please enter your name here