Home Uncategorized ವರ್ಗಾವಣೆ ದಂಧೆ?: ಶಾಸಕ ಜೆಟಿ ಪಾಟೀಲ್ ಪಿಎ ವಿರುದ್ಧ ದಿನೇಶ್ ಗುಂಡೂರಾವ್ ಪಿಎಸ್ ದೂರು

ವರ್ಗಾವಣೆ ದಂಧೆ?: ಶಾಸಕ ಜೆಟಿ ಪಾಟೀಲ್ ಪಿಎ ವಿರುದ್ಧ ದಿನೇಶ್ ಗುಂಡೂರಾವ್ ಪಿಎಸ್ ದೂರು

18
0

ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬೀಳಗಿ ಕಾಂಗ್ರೆಸ್ ಶಾಸಕ ಜೆಟಿ ಪಾಟೀಲ್ ಅವರ ಆಪ್ತ ಸಹಾಯಕ (ಪಿಎ) ಪ್ರಕಾಶ್ ಬೀಳಗಿ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು… ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬೀಳಗಿ ಕಾಂಗ್ರೆಸ್ ಶಾಸಕ ಜೆಟಿ ಪಾಟೀಲ್ ಅವರ ಆಪ್ತ ಸಹಾಯಕ (ಪಿಎ) ಪ್ರಕಾಶ್ ಬೀಳಗಿ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ​ ಕೆ.ಎ. ಹಿದಾಯತ್ ಅವರು ಶಾಸಕರ ಪಿಎ ಪ್ರಕಾಶ್ ಬೀಳಗಿ ವಿರುದ್ಧ ದೂರು ನೀಡಿದ್ದು, ಪೊಲೀಸರು ಎನ್ ಸಿಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ: ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮತ್ತೆ ವರ್ಗಾವಣೆ: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ನೇಮಕ​

ವರ್ಗಾವಣೆ ಕೋರಿಕೆ ಪರಿಶೀಲಿಸಿರುವ ಹಿದಾಯತ್ ಅವರು, ದಾಖಲೆ ಹಾಗೂ ವಾಟ್ಸ್ ಆ್ಯಪ್ ಸಂದೇಶ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ. ಜೊತೆಗೆ ಬೆದರಿಕೆ ಹಾಕಿ ಬ್ಲ್ಯಾಕ್​ಮೇಲ್ ಮಾಡಿದ ಬಗ್ಗೆಯೂ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ನಾನು ಸಚಿವರ ನಿರ್ದೇಶನದ ಮೇರೆಗೆ ಕೆಲಸ ಮಾಡುತ್ತಿದ್ದೇನೆ. ಪ್ರಕಾಶ್ ಅವರು ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಶಾಸಕರ ಕ್ಷೇತ್ರಕ್ಕೆ ಸಂಬಂಧಪಡದ ವರ್ಗಾವಣೆ ಪ್ರಸ್ತಾವಗಳು, ಕಾಲೇಜ್ ಅನುಮತಿಗಾಗಿ ನಿರಾಕ್ಷೇಪಣಾ ಪತ್ರಗಳಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಹಿದಾಯತ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕಾಶ್ ಅವರು ಕೆಲವು ಅಧಿಕಾರಿಗಳನ್ನು ಸೂಚಿಸಿದ ಜಾಗಕ್ಕೆ ವರ್ಗಾವಣೆ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಅವರು ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿರುವ ಅನುಮಾನ ಇದೆ ಎಂದು ದೂರಿದ್ದಾರೆ.

LEAVE A REPLY

Please enter your comment!
Please enter your name here