Home ಬೆಂಗಳೂರು ನಗರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

68
0
Karnataka Lokayukta.jpg1.jpg

ಬೆಂಗಳೂರು:

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಅವರು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ವಿಚಾರಣೆ ಆರಂಭಿಸಿದ್ದಾರೆ.

ಆಸ್ಪತ್ರೆಯಲ್ಲಿರುವ ಸಮಸ್ಯೆಗಳ ಕುರಿತು ಮಾಧ್ಯಮದಲ್ಲಿ ಪ್ರಕಟವಾದ ವರದಿ ಆಧರಿಸಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಉಪಲೋಕಾಯುಕ್ತರು, 4 ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ವಿಕ್ಟೋರಿಯಾ ಆಸ್ಪತ್ರೆಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಹಾಗೂ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಂದಲೂ ವರದಿ ಕೇಳಿದ್ದಾರೆ.

LEAVE A REPLY

Please enter your comment!
Please enter your name here