ಈ ವರ್ಷ ತೆರೆಕಂಡ ಅತ್ಯುತ್ತಮ ಸಿನಿಮಾಗಳ ಪೈಕಿ ಎಸ್.ಎಸ್. ರಾಜಮೌಳಿ (SS Rajamouli) ನಿರ್ದೇಶನದ ‘ಆರ್ಆರ್ಆರ್’ ಚಿತ್ರಕ್ಕೂ ಸ್ಥಾನ ಸಿಕ್ಕಿದೆ. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ ನಿರ್ಮಾಪಕರ ಜೇಬು ತುಂಬಿಸಿದೆ. ಇನ್ನು ಅನೇಕ ಕಡೆಗಳಲ್ಲಿ ಸಿನಿಮಾ ಪ್ರಶಸ್ತಿ ಬಾಚಿಕೊಳ್ಳುತ್ತಿದೆ. ಈ ಚಿತ್ರಕ್ಕೆ ಆಸ್ಕರ್ ಅವಾರ್ಡ್ ಸಿಗಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿರುವ ಮಧ್ಯೆಯೇ ‘ಆರ್ಆರ್ಆರ್’ ಚಿತ್ರ (RRR Movie) ವಿದೇಶಿ ಸಿನಿಮೋತ್ಸವಗಳಲ್ಲಿ ಸದ್ದು ಮಾಡುತ್ತಿದೆ. ಸದ್ಯ ‘ಆರ್ಆರ್ಆರ್’ ಚಿತ್ರ ‘ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಕ್ಸ್ ಸರ್ಕಲ್ ಆ್ಯನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಈ ವಿಚಾರವನ್ನು ‘ಆರ್ಆರ್ಆರ್’ ಸಿನಿಮಾದ ಅಧಿಕೃತ ಟ್ವಿಟರ್ ಖಾತೆ ಮೂಲಕ ಶೇರ್ ಮಾಡಿಕೊಳ್ಳಲಾಗಿದೆ. ಈ ವೇಳೆ ಅವಾರ್ಡ್ ನೀಡಿದವರಿಗೆ ಧನ್ಯವಾದ ತಿಳಿಸಲಾಗಿದೆ. ಈ ಪೋಸ್ಟ್ಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅಂದಹಾಗೆ, ‘ಆರ್ಆರ್ಆರ್’ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ಸಂಗೀತ ಸಂಯೋಜನೆ ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.
ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್ 2023
‘ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್ 2023’ರ ನಾಮಿನೇಷನ್ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ವಿದೇಶಿ ಭಾಷಾ ಚಿತ್ರ, ಅತ್ಯುತ್ತಮ ವಿಶ್ಯವಲ್ ಎಫೆಕ್ಟ್ ಹಾಗೂ ಅತ್ಯುತ್ತಮ ಹಾಡು ವಿಭಾಗಗಳಲ್ಲಿ ‘ಆರ್ಆರ್ಆರ್’ ಸಿನಿಮಾ ನಾಮಿನೇಟ್ ಆಗಿದೆ. 2022ರಲ್ಲಿ ಬಿಡುಗಡೆಯಾದ ಸಿನಿಮಾಗಳ ಪೈಕಿ ‘ಆರ್ಆರ್ಆರ್’ ಚಿತ್ರ ಬ್ಲಾಕ್ ಬಸ್ಟರ್ ಹಿಟ್ ಎನಿಸಿಕೊಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿ ಸೈ ಎನಿಸಿಕೊಂಡಿದೆ. ಜಗತ್ತಿನ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆಯುವತ್ತ ಈ ಸಿನಿಮಾ ಗುರಿ ಇಟ್ಟುಕೊಂಡಿದೆ. ಸ್ವತಂತ್ರವಾಗಿ ಆಸ್ಕರ್ ಪ್ರಶಸ್ತಿಗೂ ನಾಮನಿರ್ದೇಶನಗೊಳ್ಳಲು ಪ್ರಯತ್ನಿಸುತ್ತಿದೆ.
ಇದನ್ನೂ ಓದಿ: Kantara Movie: ‘ಕಾಂತಾರ’ ಚಿತ್ರದ ಯಶಸ್ಸು ಅತಿ ಹೆಚ್ಚು ಅಚ್ಚರಿ ಮೂಡಿಸಿದ್ದು ರಾಜಮೌಳಿಗೆ; ಕಾರಣ ಇಲ್ಲಿದೆ..
2023ರ ಜನವರಿಯಲ್ಲಿ ‘ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್’ ಸಮಾರಂಭ ನಡೆಯಲಿದೆ. 5 ವಿಭಾಗಗಳ ಪೈಕಿ ಯಾವೆಲ್ಲ ವಿಭಾಗಗಳಲ್ಲಿ ‘ಆರ್ಆರ್ಆರ್’ ಚಿತ್ರಕ್ಕೆ ಪ್ರಶಸ್ತಿ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಹಲವು ಪ್ರಶಸ್ತಿಗೆ ಈ ಚಿತ್ರ ನಾಮಿನೇಟ್ ಆಗುತ್ತಿರುವುದರಿಂದ ವಿಶ್ವಾದ್ಯಂತ ಇರುವ ಸಿನಿಪ್ರಿಯರು ಈ ಚಿತ್ರದ ಬಗ್ಗೆ ಗಮನ ಹರಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ