Home Uncategorized ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಿ.ವಿ ಪರೀಕ್ಷಾ ಪ್ರಾಧಿಕಾರ: ಮೈಸೂರು ವಿ.ವಿ ಪದವಿ ಪರೀಕ್ಷೆಗಳು ಮುಂದೂಡಿಕೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಿ.ವಿ ಪರೀಕ್ಷಾ ಪ್ರಾಧಿಕಾರ: ಮೈಸೂರು ವಿ.ವಿ ಪದವಿ ಪರೀಕ್ಷೆಗಳು ಮುಂದೂಡಿಕೆ

14
0

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮೈಸೂರು ವಿಶ್ವ ವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪೂರ್ವ ನಿಗದಿಯಂತೆ ಇದೇ 24ರಿಂದ ಪದವಿ ಪರೀಕ್ಷೆ ನಡೆಯಬೇಕಾಗಿತ್ತು. ಮೈಸೂರು: ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮೈಸೂರು ವಿಶ್ವ ವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪೂರ್ವ ನಿಗದಿಯಂತೆ ಇದೇ 24ರಿಂದ ಪದವಿ ಪರೀಕ್ಷೆ ನಡೆಯಬೇಕಾಗಿತ್ತು.

ಆದರೆ ಪದವಿ ಕಾಲೇಜುಗಳು ಕೇವಲ 2 ತಿಂಗಳಷ್ಟೇ ನಡೆದಿದ್ದು, ಸರಿಯಾಗಿ ಪಾಠ ಪ್ರವಚನ ನಡೆಸಿಲ್ಲ. ಕನಿಷ್ಠ 15 ದಿನಗಳ ಕಾಲ ಪರೀಕ್ಷೆ ಮುಂದೂಡಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಇದರಿಂದ ವಿಶ್ವವಿದ್ಯಾಲಯದ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಗಳನ್ನು ಮುಂದೂಡಿದ್ದು, ಆಗಸ್ಟ್ 1ರಿಂದ ಆಗಸ್ಟ್ 30ರವರೆಗೆ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ.

ವಿಧಾನಸಭೆ ಚುನಾವಣೆಗಾಗಿ ಕಾಲೇಜಿನ ಕಟ್ಟಡಗಳನ್ನು ಬಳಸಿಕೊಳ್ಳಲಾಗಿತ್ತು. ಹೀಗಾಗಿ ಪಾಠಗಳು ಸಮರ್ಪವಾಗಿ ನಡೆದಿಲ್ಲ. ಪದವಿ ಕಾಲೇಜುಗಳಲ್ಲಿ 4 ತಿಂಗಳು ನಡೆಯಬೇಕಾಗಿದ್ದ ಪಾಠ ಪ್ರವಚನಗಳು ಕೇವಲ 2 ತಿಂಗಳು ಮಾತ್ರ ನಡೆದಿದ್ದವು. ಇದುವರೆಗೆ ಪಠ್ಯ ಕ್ರಮವೂ ಲಭ್ಯವಾಗಿಲ್ಲ. ಭಾನುವಾರ ಕೂಡ ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ. ಕೇವಲ ಒಂದು ವಾರದಲ್ಲಿ ಎಲ್ಲಾ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕನಿಷ್ಠ 15 ದಿನ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಕೊನೆಗೆ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಿಶ್ವಾವಿದ್ಯಾಲಯ ಒಂದು ವಾರ ಪರೀಕ್ಷೆಗಳನ್ನು ಮುಂದೂಡಿದೆ.

LEAVE A REPLY

Please enter your comment!
Please enter your name here