
ಬೆಂಗಳೂರು:ಕೆಲವು ಮಸೂದೆಗಳ ಅಂಗೀಕಾರ ಬಾಕಿ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ವಿಸ್ತರಣೆ ಮಾಡಲಾಗಿದ್ದು, ಸೋಮವಾರವೂ ಕಲಾಪ ನಡೆಸಲು ತೀರ್ಮಾನಿಸಲಾಗಿದೆ.
ಸಭಾಧ್ಯಕ್ಷ ಯು.ಟಿ. ಖಾದರ್ ನೇತೃತ್ವದಲ್ಲಿ ಶುಕ್ರವಾರ ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಸೋಮವಾರ ವಿಧಾನಸಭೆ ಕಲಾಪ ನಡೆಸುವ ಮತ್ತು ಮಂಗಳವಾರ ರಾಜ್ಯಸಭಾ ಚುನಾವಣೆ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ.
ಬಜೆಟ್ ಚರ್ಚೆಗೆ ಸರಕಾರದ ಪರವಾಗಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಲಿದ್ದಾರೆ.