ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬುಧವಾರ ತಮ್ಮ ಮೊದಲ ಭಾಷಣವನ್ನು ಮಾಡಿದ್ದು, ಈ ವೇಳೆ ಕೃಷಿ ಸಮಸ್ಯೆಗಳ ಬಗ್ಗೆ ದನಿ ಎತ್ತಿದರು. ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬುಧವಾರ ತಮ್ಮ ಮೊದಲ ಭಾಷಣವನ್ನು ಮಾಡಿದ್ದು, ಈ ವೇಳೆ ಕೃಷಿ ಸಮಸ್ಯೆಗಳ ಬಗ್ಗೆ ದನಿ ಎತ್ತಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ‘ಕಿಸಾನ್ ಸಮ್ಮಾನ್ ಯೋಜನೆ’ಗೆ ಹಣ ಮೀಸಲಿಟ್ಟಿಲ್ಲ ಎಂದು ಟೀಕಿಸಿದರು.
“ಕೇಂದ್ರದ ಮೋದಿ ಸರ್ಕಾರವು ಪ್ರತಿ ರೈತನಿಗೆ 6,000 ರೂ.ಗಳನ್ನು ಬಿಡುಗಡೆ ಮಾಡುತ್ತಿದೆ ಮತ್ತು ಬಿಎಸ್ ಯಡಿಯೂರಪ್ಪ ಅವರು ರಾಜ್ಯ ಮುಖ್ಯಮಂತ್ರಿಯಾಗಿದ್ದಾಗ, ರಾಜ್ಯದ ವತಿಯಿಂದ 4,000 ರೂ.ಗಳನ್ನು ಬಿಡುಗಡೆ ಮಾಡುವ ನಿರ್ಧಾರ ತೆಗೆದುಕೊಂಡಿದ್ದರು. ದುರದೃಷ್ಟವಶಾತ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಅದನ್ನು ನಿಲ್ಲಿಸಿದೆ’ ಎಂದು ಟೀಕಿಸಿದರು.
ರಸಗೊಬ್ಬರಗಳಿಗೆ ಸಬ್ಸಿಡಿ ನೀಡುವ ಮೂಲಕ ರೈತಪರವಾಗಿ ಮೋದಿ ಸರ್ಕಾರ ಸಾಕಷ್ಟು ಕೆಲಸವನ್ನು ಕೆಲಸವನ್ನು ಮಾಡಿದೆ. ರಾಜ್ಯದ ಆಡಳಿತಾರೂಢ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರು ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಜನವಿರೋಧಿ, ರೈತ ವಿರೋಧಿ ಎಂದು ಬಿಂಬಿಸಿ, ಟೀಕಿಸುತ್ತಲೇ ಸಮಯ ವ್ಯರ್ಥ ಮಾಡಬಾರದು ಎಂದು ಸಲಹೆ ನೀಡಿದರು.