ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು. ಬೆಂಗಳೂರು: ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು.
ಪ್ರವೇಶ ದ್ವಾರ ಹಾಗೂ ಹೊರ ಆವರಣದಲ್ಲಿ ಗೋಮೂತ್ರ ಸಿಂಪಡಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಶುದ್ಧೀಕರಣ ನಡೆಸಿದರು. ಬಳಿಕ ವೈದಿಕರ ಮೂಲಕ ಪೂಜೆ ನೆರವೇರಿಸಿದರು.
#WATCH | Bengaluru: Congress workers sprinkle cow urine and perform Pooja at the State Assembly in Bengaluru. They said that they are ‘purifying’ Vidhana Soudha. pic.twitter.com/SWapoH7vOL
— ANI (@ANI) May 22, 2023
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು, ಹಿಂದಿನ ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯದಿಂದ ತೊಲಗಿ ಶುದ್ಧ ಆಡಳಿತ ನಡೆಸಲು ಕಾಂಗ್ರೆಸ್ ಪಕ್ಷಕ್ಕೆ ಜನ ಸ್ಪಷ್ಟ ಬಹುಮತ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಯ ಒಳಿತಿಗಾಗಿ ಶಕ್ತಿ ಕೇಂದ್ರ ವಿಧಾನಸೌಧದ ಮುಂಭಾಗದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು ಎಂದು ಹೇಳಿದರು.