Home Uncategorized ವಿಧಾನಸೌಧದ ಎದುರು ಅಶ್ವಾರೋಹಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾ 

ವಿಧಾನಸೌಧದ ಎದುರು ಅಶ್ವಾರೋಹಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾ 

84
0

ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾ.26 ರಂದು ಅನಾವರಣಗೊಳಿಸಿದರು.  ಬೆಂಗಳೂರು: ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾ.26 ರಂದು ಅನಾವರಣಗೊಳಿಸಿದರು. 

ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳು ಸ್ಥಾಪನೆಯಾಗಿವೆ. 

ಸುಮಾರು ರೂ.8 ಕೋಟಿ ವೆಚ್ಚದಲ್ಲಿ ಪ್ರತಿಮೆ ಸಿದ್ಧಗೊಂಡಿದ್ದು, ಕಳೆದ ಜನವರಿಯಲ್ಲಿ ಪ್ರತಿಮೆ ಸ್ಥಾಪನೆ ಸಂಬಂಧ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.

ಕಾರ್ಯಕ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಕಂದಾಯ ಸಚಿವ ಅಶೋಕ್, ಸುತ್ತೂರು ಶ್ರೀಗಳು,  ಸಿದ್ದಗಂಗಾ ಶ್ರೀಗಳು, ಪೇಜಾವರ ಶ್ರೀಗಳು, ನಿರ್ಮಲಾನಂದನಾಥ ಶ್ರೀಗಳು ಸೇರಿದಂತೆ ಅನೇಕ ಸ್ವಾಮೀಜಿಗಳು, ಗಣ್ಯರು ಭಾಗಿಯಾಗಿದ್ದರು. ಇನ್ನು ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ, ರಾತ್ರಿ ಬಿಜೆಪಿಯ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಯಲಿದೆ.  

LEAVE A REPLY

Please enter your comment!
Please enter your name here