ಬಜೆಟ್ ಮಂಡನೆ ವೇಳೆ ವಕೀಲರೊಬ್ಬರು ಅಕ್ರಮವಾಗಿ ಪ್ರವೇಶಿಸಿ ಶಾಸಕರ ಕುರ್ಚಿಯಲ್ಲಿ ಕುಳಿತಿದ್ದ ಪ್ರಕರಣದ ನಂತರ, ವಿಧಾನಸೌಧದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಭದ್ರತಾ ಸಿಬ್ಬಂದಿಗಳು ಪ್ರತಿಯೊಬ್ಬರ ಮೇಲೆ ನಿಗಾ ವಹಿಸಿ ತಪಾಸಣೆ ನಡೆಸುತ್ತಿದ್ದಾರೆ. ಬೆಂಗಳೂರು: ಬಜೆಟ್ ಮಂಡನೆ ವೇಳೆ ವಕೀಲರೊಬ್ಬರು ಅಕ್ರಮವಾಗಿ ಪ್ರವೇಶಿಸಿ ಶಾಸಕರ ಕುರ್ಚಿಯಲ್ಲಿ ಕುಳಿತಿದ್ದ ಪ್ರಕರಣದ ನಂತರ, ವಿಧಾನಸೌಧದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಭದ್ರತಾ ಸಿಬ್ಬಂದಿಗಳು ಪ್ರತಿಯೊಬ್ಬರ ಮೇಲೆ ನಿಗಾ ವಹಿಸಿ ತಪಾಸಣೆ ನಡೆಸುತ್ತಿದ್ದಾರೆ.
ಈ ತಪಾಸಣೆ ವೇಳೆ ಹಲವರ ಬಳಿ ನಕಲಿ ಪಾಸ್ ಹಾಗೂ ನಕಲಿ ಗುರುತಿನ ಚೀಟಿಗಳು ಪತ್ತೆಯಾಗುತ್ತಿರುವುದು ಕಂಡು ಬಂದಿದೆ. ಈ ಪಾಸ್ ಗಳನ್ನು ಜಪ್ತಿ ಮಾಡುತ್ತಿರುವ ಪೊಲೀಸರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.
ಇದನ್ನೂ ಓದಿ: ವಿಧಾನಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ: ಶಾಸಕರ ಕುರ್ಚಿಯಲ್ಲಿ ಅನಾಮಿಕ ವ್ಯಕ್ತಿ!
ತಪಾಸಣೆ ವೇಳೆ ಇದೀಗ 300 ಕ್ಕೂ ಹೆಚ್ಚು ನಕಲಿ ಪಾಸ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ನಕಲಿ ಪಾಸ್ಗಳ ಹಿಂದಿನ ಉದ್ದೇಶ ಏನಾಗಿತ್ತು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.