ವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋಣ್ ಹಾರಾಟ ನಡೆಸಿದ ಆರೋಪದ ಮೇಲೆ ನಗರದ ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಬೆಂಗಳೂರು: ವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋಣ್ ಹಾರಾಟ ನಡೆಸಿದ ಆರೋಪದ ಮೇಲೆ ನಗರದ ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.
ಅರುಣ್, ವಿನೋದ್ ಬಂಧನಕ್ಕೊಳಗಾದ ಯುವಕರಾಗಿದ್ದಾರೆ. ಬಂಧನದ ಬಳಿಕ ವಿಶೇಷ ಜಾಮೀನಿನ ಮೇಲೆ ಇಬ್ಬರೂ ಬಿಡುಗಡೆಯಾಗಿದ್ದಾರೆ.
ವಿಧಾನಸೌಧ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಡ್ರೋಣ್ ಹಾರಿಸುವುದಕ್ಕೆ ನಿರ್ಬಂಧಿಸಿರುವ ವಿಚಾರ ತಿಳಿಯದೆ ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಡಿಯೋ ಚಿತ್ರೀಕರಣಕ್ಕೆ ಈ ಇಬ್ಬರು ಯುವಕರು ವಿಧಾನಸೌಧದ ಬಳಿ ಬಂದಿದ್ದರು.
ಇದರಂತೆ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಡ್ರೋಣ್ ಹಾರಿಸಿದ್ದರು, ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದರಂತೆ ಇಬ್ಬರನ್ನು ಬಂಧನಕ್ಕೊಳಪಡಿಸಿ, ಡ್ರೋಣ್ ನ್ನು ವಶಕ್ಕೆ ಪಡೆದುಕೊಂಡಿದ್ದರು.