Home Uncategorized ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷ; ವರದಿ

ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷ; ವರದಿ

29
0

ಹೊಸದಿಲ್ಲಿ: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದ್ದಾಗಿ NDTV ವರದಿ ಮಾಡಿದೆ. ಈ ಕುರಿತು ಅಧಿಕೃತ ಹೇಳಿಕೆ ಇನ್ನಷ್ಟೇ ಬರಬೇಕಿದೆ.

ಈ ಹುದ್ದೆಗೆ ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿ(ಯು) ಮುಖ್ಯಸ್ಥ ನಿತೀಶ್‌ ಕುಮಾರ್‌ ಕೂಡ ಆಕಾಂಕ್ಷಿ ಎಂದು ತಿಳಿಯಲಾಗಿತ್ತಾದರೂ, ಕಾಂಗ್ರೆಸ್‌ ಪಕ್ಷದ ಯಾರಾದರೂ ಈ ಹುದ್ದೆ ವಹಿಸಬೇಕೆಂದು ಅವರು ಇಂದಿನ ಸಭೆಯಲ್ಲಿ ಹೇಳಿದರು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here