Home ಕರ್ನಾಟಕ ವಿಪಕ್ಷ ನಾಯಕರನ್ನಾಗಿ ರಾಹುಲ್‌ ಗಾಂಧಿ ಅವರನ್ನು ನೇಮಕಗೊಳಿಸಲು ಸರ್ವಾನುಮತದ ನಿರ್ಣಯ ಕೈಗೊಂಡ ಕಾಂಗ್ರೆಸ್‌

ವಿಪಕ್ಷ ನಾಯಕರನ್ನಾಗಿ ರಾಹುಲ್‌ ಗಾಂಧಿ ಅವರನ್ನು ನೇಮಕಗೊಳಿಸಲು ಸರ್ವಾನುಮತದ ನಿರ್ಣಯ ಕೈಗೊಂಡ ಕಾಂಗ್ರೆಸ್‌

21
0

ಹೊಸದಿಲ್ಲಿ: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರನ್ನು ಲೋಕಸಭೆಯ ವಿಪಕ್ಷ ನಾಯಕರನ್ನಾಗಿ ನೇಮಕಗೊಳಿಸುವ ಸರ್ವಾನುಮತದ ನಿರ್ಣಯವನ್ನು ಇಂದು ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆ ಕೈಗೊಂಡಿದೆ.

ವಯನಾಡ್‌ ಮತ್ತು ರಾಯ್‌ಬರೇಲಿ ಎರಡೂ ಕ್ಷೇತ್ರಗಳಿಂದ ಜಯ ಗಳಿಸಿರುವ ರಾಹುಲ್‌ ತಾವು ಈ ಪ್ರಸ್ತಾವನೆಯ ಬಗ್ಗೆ ಯೋಚಿಸುವುದಾಗಿ ಸಭೆಯಲ್ಲಿ ತಿಳಿಸಿದರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆ ಸಂದರ್ಭ ರಾಹುಲ್‌ ಗಾಂಧಿ ಅವರನ್ನುದ್ದೇಶಿಸಿ, ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಈ ನಿರ್ಣಯ ಅಂಗೀಕರಿಸಿರುವುದರಿಂದ ರಾಹುಲ್‌ ಅದನ್ನು ಒಪ್ಪಿಕೊಳ್ಳಬೇಕೆಂದು ಸೂಚಿಸಿದರು.

ಇನ್ನೊಂದು ನಿರ್ಣಯದಲ್ಲಿ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿಯು ಲೋಕಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಳ್ಳಬೇಕೆಂದು ಸರ್ವಾನುಮತದಿಂದ ವಿನಂತಿಸಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಸಭೆಯ ನಂತರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here