ಬೆಂಗಳೂರು: ಸಂಸತ್ ಕಲಾಪದಿಂದ ವಿರೋಧ ಪಕ್ಷದ ಸದಸ್ಯರ ಅಮಾನತು ಖಂಡಿಸಿ ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಹಾಗೂ ಪ್ರತಿಭಟನೆ ನಂತರ ಮಾಧ್ಯಮಗಳ ಜತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ಎಚ್ ಎಂ ರೇವಣ್ಣ, ಶಾಸಕ ಪ್ರಸಾದ್ ಅಬ್ಬಯ್ಯ, ಎಂಎಲ್ ಸಿ ಯು ಬಿ ವೆಂಕಟೇಶ್, ಮಾಜಿ ಸಂಸದ ಉಗ್ರಪ್ಪ, ಮಾಜಿ ಮೇಯರ್ ಹುಚ್ಚಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.