Home Uncategorized ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫ್ರೀಡಂ ಪಾರ್ಕ್‍ನಲ್ಲಿ ಧರಣಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫ್ರೀಡಂ ಪಾರ್ಕ್‍ನಲ್ಲಿ ಧರಣಿ

11
0

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ನೇತೃತ್ವದಲ್ಲಿ ಬಿಬಿಎಂಪಿ ನೌಕರರು ಶುಕ್ರವಾರದಂದು ಇಲ್ಲಿನ ಫ್ರಿಡಂ ಪಾರ್ಕ್‍ನಲ್ಲಿ ಧರಣಿ ಆರಂಭಿಸಿದ್ದಾರೆ.

ಬಿಬಿಎಂಪಿಯಲ್ಲಿ 5219 ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಮಂಜೂರಾತಿ ನೀಡಿಲ್ಲ. ಬೆಂಗಳೂರು ನಗರದಲ್ಲಿ 1ಕೋಟಿ 30ಲಕ್ಷ ಜನಸಂಖ್ಯೆ ಇದ್ದು, ಇದರ ಅನುಗುಣವಾಗಿ ಅಧಿಕಾರಿ, ಸಿಬ್ಬಂದಿಗಳ ಸಂಖ್ಯೆ ಇದ್ದಾಗ ಸುಲಭ ಕಾರ್ಯನಿರ್ವಹಣೆ ಮಾಡಬಹುದಾಗಿದೆ. ಮತ್ತೆ ಕಳೆದ ನಾಲ್ಕು ವರ್ಷಗಳಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ ಆಚರಣೆ ಮಾಡಿಲ್ಲದಿರುವುದು ಸರಿಯಾದ ಕ್ರಮವಲ್ಲ ಎಂದು ಧರಣಿನಿರತರು ಎಂದು ಖಂಡಿಸಿದರು.

ಕಂದಾಯ ಇಲಾಖೆ ವರ್ಷದಿಂದ ವರ್ಷಕ್ಕೆ ತೆರಿಗೆ ಸಂಗ್ರಹ ಹೆಚ್ಚಳವಾದರೂ ಅಧಿಕಾರಿ, ನೌಕರರ ಮೇಲೆ ವಿನಾಕಾರಣ ಕಿರುಕುಳ ಅಮಾನತು ಮಾಡಲಾಗುತ್ತಿದೆ. 2022-20ನೇ ಸಾಲಿನಲ್ಲ 3339ಕೋಟಿ ಮತ್ತು 2023-24ರ ಸಾಲಿನಲ್ಲಿ 3598 ಕೋಟಿ ತೆರಿಗೆ ಸಂಗ್ರಹ ಮಾಡಲಾಗಿದೆ ಎಂದು ಧರಣಿನಿರತ ಬಿಬಿಎಂಪಿ ನೌಕರರು ತಿಳಿಸಿದರು.

ಸಹಾಯಕ ಕಂದಾಯ ಅಧಿಕಾರಿ ಲಕ್ಷ್ಮಿ ಅವರ ವಿರುದ್ದ 5ವರ್ಷದಿಂದ ಇಲಾಖಾ ವಿಚಾರಣೆಯ ಅಂತಿಮ ಆದೇಶ ನೀಡದೇ ಅಮಾನತು ಮಾಡಿರುವುದು. ಆರ್.ಆರ್.ನಗರ ವಲಯದಲ್ಲಿ ಆರೋಗ್ಯಧಿಕಾರಿ ದೇವಿಕಾರಾಣಿರವರಿಗೆ ಸ್ಥಳ ನಿಯೋಜನೆ ಮಾಡದೇ ಇರುವುದು. ಅಂಗ್ಲ ಭಾಷೆ ಫಲಕಕ್ಕೆ ಅನಾಮಧೇಯರು ಕಲ್ಲು ತೂರಿ ಹಾನಿ ಮಾಡಿದ ಪ್ರಕರಣದಲ್ಲಿ ವಿನಾಕಾರಣದಿಂದ ಹಿರಿಯ ಆರೋಗ್ಯ ಪರಿವಿಕ್ಷಕ ಕೆ.ಎಲ್.ವಿಶ್ವನಾಥ್‍ರನ್ನು ಅಮಾನತು ಮಾಡಲಾಗಿದೆ ಎಂದು ಅವರು ಖಂಡಿಸಿದರು.

ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಕಛೇರಿಯ ಹೊರಗಿನ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಹೆಚ್ಚು ಆದುದರಿಂದ ಬಯೋಮೆಟ್ರಿಕ್ ಮೂಲಕ ಬೆಳಗ್ಗೆ 10 ಗಂಟೆಗೆ ಲಾಗ್ ಇನ್ ಮತ್ತು ಸಂಜೆ 5.30 ಲಾಗ್ ಆಫ್ ನಿಭಂದನೆಯನ್ನು ತೆರವುಗೊಳಿಸಬೇಕು. ಬಿಬಿಎಂಪಿ ಕಿರಿಯ ಅಭಿಯಂತರುಗಳ 108 ಹುದ್ದೆಗಳ ನೇಮಕಾತಿ ಮತ್ತು ಮುಂಬಡ್ತಿಗಾಗಿ 10 ಅಧೀಕ್ಷಕ ಅಭಿಯಂತರರ ಹುದ್ದೆಗಳು, 20 ಕಾರ್ಯಪಾಲಕ ಅಭಿಯಂತರ ಹುದ್ದೆಗಳ ವಿಚಾರದಲ್ಲಿ ಸರಕಾರಕ್ಕೆ ಪ್ರಸ್ಥಾವನೆ ಸಲ್ಲಿಸಬೇಕಿದೆ ಎಂದು ಹೇಳಿದರು.

ಇಂಜನಿಯರಿಂಗ್ ವಿಭಾಗದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಕೊಡಲೆ ಕಳುಹಿಸಬೇಕು. ಬಿಬಿಎಂಪಿ ಎ ಶ್ರೇಣಿಯ ಅಧಿಕಾರಿಗಳು ಮುಂಬಡ್ತಿ ಪಡೆಯಲು ಸರಕಾರಕ್ಕೆ ಅಧಿಕಾರ ನೀಡಲಾಗಿದೆ. ಇದು ಸರಕಾರದ ಹಂತದಲ್ಲಿ ವಿಳಂಬವಾಗುತ್ತಿರುವುದರಿಂದ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಎ ಶ್ರೇಣಿ ಅಧಿಕಾರಗಳಿಗೆ ಮುಂಬಡ್ತಿ ಮಾಡುವ ಅಧಿಕಾರ ನೀಡಬೇಕು. 198 ವಾರ್ಡ್ ಗಳಿಗೆ 225 ವಾರ್ಡ್ ಅಧಿಕಾರಿ, ಸಿಬ್ಬಂದಿಗಳ ಕೊರತೆ ಇದೆ ಸಕಾಲಕ್ಕೆ ಸಿಬ್ಬಂದಿಗಳ ನೇಮಕ ಮಾಡಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಮುಖ್ಯ ಆಯುಕ್ತರು ಈ ಕೊಡಲೆ ನಮ್ಮ ಬೇಡಿಕೆಗಳನ್ನು ಈಡೇರಿಸಿ ಸುತ್ತೋಲೆಯನ್ನು ಹೊರಡಿಸಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಸಂಘದ ಪದಾಧಿಕಾರಿಗಳಾದ ಸೋಮಶೇಖರ್, ಕೆ. ನರಸಿಂಹ, ಹೆಚ್.ಕೆ.ತಿಪ್ಪೇಶ್, ರೇಣುಕಾಂಬ, ಕೆ.ಮಂಜೇಗೌಡ, ಎಸ್.ಜಿ. ಸುರೇಶ್, ಮಂಜುನಾಥ್, ಉಮೇಶ್ ವಿ, ಸಂತೋಷ್ ಕಮಾರ್ ನಾಯ್ಕ್, ಸಂತೋಷ್ ಕುಮಾರ್, ಹೆಚ್.ಬಿ. ಹರೀಶ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here