ಸ್ವಾಮಿ ವಿವೇಕಾನಂದರಂತೆ ಬದ್ಧತೆಯಿಂದ ಕೆಲಸ ಮಾಡುವ ಸಂಸ್ಕೃತಿಯನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ಗುರುವಾರ ಕಿವಿಮಾತು ಹೇಳಿದರು. ಬೆಂಗಳೂರು: ಸ್ವಾಮಿ ವಿವೇಕಾನಂದರಂತೆ ಬದ್ಧತೆಯಿಂದ ಕೆಲಸ ಮಾಡುವ ಸಂಸ್ಕೃತಿಯನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ಗುರುವಾರ ಕಿವಿಮಾತು ಹೇಳಿದರು.
ಸ್ವಾಮಿ ವಿವೇಕಾನಂದ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ಯಶವಂತಪುರ ಮೆಟ್ರೋ ಹಾಗೂ ಬೆಂಗಳೂರಿನ 18ನೇ ಅವೆನ್ಯೂ ಗಾರ್ಡನ್‌ನಲ್ಲಿರುವ ವಿವೇಕಾನಂದರ ಪ್ರತಿಮೆಗಳಿಗೆ ಅಶ್ವತ್ಥ್ ನಾರಾಯಣ್ ಅವರು ಮಾಲಾರ್ಪಣೆ ಮಾಡಿದರು. ಈವೇಳೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕಲಿಕೆಯ ಸಮಯದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ, ಶೈಕ್ಷಣಿಕ, ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ನೈತಿಕ ದೃಷ್ಟಿಕೋನಗಳನ್ನು ಅಳವಡಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹೊಸ ಶಿಕ್ಷಣ ನೀತಿಯನ್ನು (ಎನ್‌ಇಪಿ) ಪರಿಚಯಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ವಿದ್ಯಾರ್ಥಿಗಳನ್ನು ಭವಿಷ್ಯದ ಶಿಲ್ಪಿಗಳು ಎಂದು ಕರೆದ ಸಚಿವರು, ಜಾಗತಿಕ ಪೈಪೋಟಿ ಇರುವ ಈ ಯುಗದಲ್ಲಿ ಸ್ವಾಮಿ ವಿವೇಕಾನಂದರಿಂದ ವಿದ್ಯಾರ್ಥಿಗಳು ಸ್ಫೂರ್ತಿ ಪಡೆಯಬೇಕು. ಪ್ರಧಾನಿ ಮೋದಿ ಅವರು ಯುವಕರ ಅಭಿವೃದ್ಧಿಗೆ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನ ಸೇಫ್ ಫೌಂಡೇಶನ್ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಜನವರಿ 20, 21 ಮತ್ತು 22 ರಂದು ಜಯನಗರದಲ್ಲಿ ಆಯೋಜಿಸಿದೆ. ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಎರಡು ಹಂತದ ಪ್ರತಿಭಾನ್ವೇಷಣೆ ಅನ್ವೇಷ 2023 ಅನ್ನು ಆಯೋಜಿಸಲು ಕೂಡ ಸಜ್ಜಾಗಿದೆ.
ಮೊದಲ ಹಂತದಲ್ಲಿ, ಆನ್‌ಲೈನ್ ಎಂಸಿಕ್ಯೂ ಪರೀಕ್ಷೆಯ ಮೂಲಕ 120 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು ಮತ್ತು ಎರಡನೆ ಹಂತದಲ್ಲಿ ವಿದ್ಯಾರ್ಥಿಗಳು ಮೈಸೂರಿನಲ್ಲಿ ನಡೆಯುವ ಶಿಬಿರಕ್ಕೆ ತೆರಳುತ್ತಾರೆ, ಅಲ್ಲಿ ಐದು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಿಂದ 20,000 ರೂಪಾಯಿ ನಗದು ಬಹುಮಾನದೊಂದಿಗೆ ಪ್ರತಿಭಾ ಪ್ರಶಸ್ತಿಯನ್ನು ನೀಡಲಾಗುತ್ತದೆ.
