Home Uncategorized ವೋಟರ್ ಐಡಿ ಅಕ್ರಮ: ಮತ್ತೆ ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಣೆಗೆ ಡಿ.24ರವರೆಗೆ ಸಮಯಾವಕಾಶ

ವೋಟರ್ ಐಡಿ ಅಕ್ರಮ: ಮತ್ತೆ ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಣೆಗೆ ಡಿ.24ರವರೆಗೆ ಸಮಯಾವಕಾಶ

38
0

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್​ ಐಡಿ ಪರಿಕ್ಷರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಮಧ್ಯವ್ರವೇಶಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆ ದಿನಾಂಕವನ್ನು ಡಿಸೆಂಬರ್ 24 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಇಲೆಕ್ಷನ್ ಕಮಿಷನ್ ಆಫ್ ಇಂಡಿಯಾ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಯ ಸಮಯಾವಕಾಶವನ್ನು ಹೆಚ್ಚಿಸಿದೆ.

ಚುನಾವಣಾ ಮತಪಟ್ಟಿ ಪರಿಷ್ಕರಣೆ ಪರಿಶೀಲನೆಗೆ ಬಿಬಿಎಂಪಿಯಿಂದ ಹೊರತಾದ ಇಬ್ಬರು ವಿಶೇಷಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಅನಧಿಕೃತವಾಗಿ, ನೇರವಾಗಿ, ಪರೋಕ್ಷವಾಗಿ ವೋಟರ್ ಐಡಿ ದಾಖಲೆಗಳ ಸಂಗ್ರಹ ಆಗಬಾರದು. ಮತದಾರರ ಪಟ್ಟಿಯನ್ನು 100  ಪ್ರತಿಶತದಷ್ಟು ಪರಿಷ್ಕರಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

3 ವಿಧಾನಸಭಾ ಕ್ಷೇತ್ರಗಳ ಅಧಿಕಾರಿಗಳ ಅಮಾನತು

ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರ ಕ್ಷೇತ್ರದ ​ಮೂವರು ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.

ಬೆಂಗಳೂರು ವೋಟರ್ ಐಡಿ ಅಕ್ರಮ ಪ್ರಕರಣದ ತನಿಖೆಗಾಗಿ 7 IAS ಅಧಿಕಾರಿಗಳನ್ನು ನೇಮಿಸಿದ ಕೇಂದ್ರ ಚುನಾವಣೆ ಆಯೋಗ

 ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದ್ದು, ಪ್ರಕರಣದಲ್ಲಿ ಐಎಎಸ್‌ ಅಧಿಕಾರಿಗಳೂ ಭಾಗಿಯಾಗಿರುವುದು ದೃಢವಾಗಿದೆ. ಕೇವಲ ಕೆಳಹಂತದ ಅಧಿಕಾರಿಗಳು ಭಾಗಿಯಾಗಿದ್ರು ಎನ್ನಲಾಗುತ್ತಿತ್ತು. ಆದ್ರೆ ಇಬ್ಬರು ಐಎಎಸ್‌ ಅಧಿಕಾರಿಗಳಾದ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಭಾಗಿಯಾಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿದ್ದು,  ವೋಟರ್ ಐಡಿ ಅಕ್ರಮದ ಬಗ್ಗೆ ತನಿಖೆಗಾಗಿ ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಿಸಿದೆ.

ಮತದಾರ ಪಟ್ಟಿಯಿಂದ ತೆಗೆದು ಹಾಕಿರುವುದು, ಸೇರ್ಪಡೆ, ತಿದ್ದುಪಡಿ ಬಗ್ಗೆ ಪೂರ್ಣಪರಿಶೀಲನೆ ಎಂದು ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಕ ಮಾಡಿ ಕೇಂದ್ರ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಿದೆ. ಅದರಲ್ಲೂ ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ವಲಯದಲ್ಲಿ ವಿಶೇಷವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತನಿಖೆಗೆ ಐಎಎಸ್ ಅಧಿಕಾರಿ ವಿಶಾಲ್ ಅವರನ್ನು ನೇಮಕ ಮಾಡಲಾಗಿದೆ. ಮಹಾದೇವಪುರ ವಲಯಕ್ಕೆ ಅಜೇಯ್ ನಾಗಭೂಷಣ್ ಹಾಗೂ ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಅವರನ್ನು ನೇಮಿಸಿದೆ.

ಖಾಸಗಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಿಂದ ಮತದಾರರ ಹೆಸರು ಡಿಲೀಟ್ ಆದವರ ಬಗ್ಗೆ ಕೂಲಂಕಷವಾಗಿ ಪರಿಶೀಲನೆಗೆ ಆದೇಶಿಸಿದ್ದು, ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ, ಹಾಗೂ ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೂಡಾ ಅಮಾನತು ಮಾಡಿದೆ. ಅಲ್ಲದೇ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಕೇಂದ್ರ ಚುನಾವಣಾ ಆಯೋಗ ಆದೇಶ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here