Home Uncategorized ವ್ಯಕ್ತಿಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ದುಷ್ಕರ್ಮಿಗಳು!

ವ್ಯಕ್ತಿಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ದುಷ್ಕರ್ಮಿಗಳು!

21
0

ಹೊಸದಿಲ್ಲಿ : ಉತ್ತರ ಪ್ರದೇಶದ ನೋಯ್ಡಾದಲ್ಲಿ ವ್ಯಕ್ತಿಯೊಬ್ಬರನ್ನು ಹಲವು ಬಾರಿ ಇರಿದು, ಬೈಕ್‌ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿದಿರುವ ಅಮಾನುಷ ಘಟನೆ ವರದಿಯಾಗಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮೆಹದಿ ಹಸನ್ ಎಂದು ಗುರುತಿಸಲಾಗಿದೆ.

ಪ್ರಕರಣದಲ್ಲಿ ಅನುಜ್ ಮತ್ತು ನಿತಿನ್ ಎಂಬ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here