ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ. ಬೆಂಗಳೂರು: ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ.
ಈ ಪತ್ರವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಡಿ. ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ‘ಶಕ್ತಿ ಯೋಜನೆ’ ಯಿಂದ ಧರ್ಮಸ್ಥಳಕ್ಕೆ ಬರುವ ಮಹಿಳೆಯ ಪ್ರಮಾಣ ಹೆಚ್ಚಾಗಿದೆ. ಮಂಜುನಾಥ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಅವಕಾಶ ಇದ್ದಾಗ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಹ್ವಾನ ನೀಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರು ನಾನು ಮಂಡಿಸಿದ 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಬರೆದಿರುವ ಪತ್ರಕ್ಕೆ ಧನ್ಯವಾದಗಳು.
– ಮುಖ್ಯಮಂತ್ರಿ @siddaramaiah pic.twitter.com/em7r4s1W4N
— CM of Karnataka (@CMofKarnataka) July 13, 2023
ಗ್ಯಾರಂಟಿ ಯೋಜನೆಗಳ ಮೂಲಕ ಉಪಯುಕ್ತ ಕಾರ್ಯಕ್ರಮಗಳನ್ನ ನೀಡುತ್ತಿದ್ದೀರ. ಧರ್ಮಸ್ಥಳಕ್ಕೆ ಬರುತ್ತಿರುವ ಮಹಿಳಾ ಭಕ್ತರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀಮಂಜುನಾಥ್ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ. ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿದ್ದಕ್ಕೆ ಧನ್ಯವಾದ ಎಂದು ಪತ್ರದಲ್ಲಿ ಬರೆದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜೂ.11 ರಿಂದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಇನ್ನು ಜೂ.11ರಿಂದ ಜುಲೈ 10ರವರೆಗೆ ಅಂದರೆ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ 16,75,77,752 ಮಹಿಳಾ ಪ್ರಯಾಣಿಕರು (16.75 ಕೋಟಿ) ಸಂಚಾರ ಮಾಡಿದ್ದಾರೆ. ಈ ಯೋಜನೆಗೆ ಮಹಿಳೆಯರಿಂದ ಅಭೂತಪೂರ್ವ ಬೆಂಬಲವೂ ವ್ಯಕ್ತವಾಗಿದೆ.