ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ದೇವಸ್ಥಾನಗಳ ಆದಾಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ದೇವಸ್ಥಾನಗಳ ಆದಾಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಪ್ರವಾಸೋದ್ಯಮ ಮತ್ತು ಪುರಾತತ್ವ ವಸ್ತುಸಂಗ್ರಹಾಲಯ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ‘ನಮ್ಮ ಸ್ಮಾರಕ: ನಮ್ಮ ಪರಂಪರೆ, ನಮ್ಮ ಗುರುತು, ನಮ್ಮ ಹೆಮ್ಮೆ’ ಅಭಿಯಾನದ ಸಂವಾದ ಮತ್ತು ಡಿಜಿಟಲ್ ವೇದಿಕೆಯನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.
ಇದನ್ನು ಓದಿ: ಕಂಡಕ್ಟರ್ ಗಳಿಗೆ ತಲೆನೋವಾಗಿ ಪರಿಣಮಿಸಿದೆ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ
“ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿವೆ. ಶಕ್ತಿ ಯೋಜನೆಯ ಹಿಂದಿನ ಕಾಳಜಿ ಏನೆಂದರೆ, ಬಡವರೂ ಆಧ್ಯಾತ್ಮಿಕ ಮತ್ತು ಪರಿಸರ ಪ್ರವಾಸೋದ್ಯಮ ಕೇಂದ್ರಗಳು ಹಾಗೂ ದೇವಾಲಯಗಳಿಗೆ ಹೋಗಲು ಅವಕಾಶ ನೀಡಬೇಕು. 60 ಲಕ್ಷ ಮಹಿಳೆಯರು ಇದರ ಲಾಭ ಪಡೆದಿದ್ದಾರೆ ಮತ್ತು ದೇವಾಲಯಗಳ ಆದಾಯ ಹೆಚ್ಚಳವಾಗಿದೆ ಎಂದರು.
“ಆರ್ಥಿಕತೆಯು ವೇಗ ಪಡೆಯುತ್ತಿದೆ ಮತ್ತು ವ್ಯಾಪಾರ ಹಾಗೂ ವಹಿವಾಟುಗಳು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುತ್ತಿವೆ. ಈ ಎಲ್ಲಾ ಕಾಳಜಿ ಶಕ್ತಿ ಯೋಜನೆಯ ಹಿಂದೆ ಕೆಲಸ ಮಾಡಿದೆ” ಎಂದು ಸಿಎಂ ಹೇಳಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆದರೆ ದೇಶದ ಸಾಂಸ್ಕೃತಿಕ ಹೆಮ್ಮೆ ಹೆಚ್ಚುತ್ತದೆ ಮತ್ತು ಆರ್ಥಿಕತೆಗೆ ಉತ್ತೇಜನ ಸಿಗುತ್ತದೆ ಎಂದರು.
‘‘ಇತಿಹಾಸದ ಅರಿವಿಲ್ಲದವರು ಭವಿಷ್ಯ ರೂಪಿಸಿಕೊಳ್ಳಲಾರರು ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತನ್ನು ಯಾರೂ ಮರೆಯಬಾರದು… ಇಂದಿನ ಪೀಳಿಗೆಗೆ ನಮ್ಮ ಇತಿಹಾಸ ಅರ್ಥವಾಗುವಂತೆ ಹಾಗೂ ನಮ್ಮ ಪರಂಪರೆಯ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸ್ಮಾರಕಗಳ ರಕ್ಷಣೆ ಅತ್ಯಗತ್ಯ ಎಂದರು.