Home ಕರ್ನಾಟಕ ಶಾಸಕ ಎಚ್‌.ಡಿ.ರೇವಣ್ಣಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಶಾಸಕ ಎಚ್‌.ಡಿ.ರೇವಣ್ಣಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

22
0

ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ವಶದಲ್ಲಿರುವ ಎಚ್‌.ಡಿ.ರೇವಣ್ಣ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಮಂಗಳವಾರ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಾಲ್ಕು ದಿನಗಳಿಂದ ಎಸ್‌ಐಟಿ ವಶದಲ್ಲಿರುವ ಶಾಸಕ ಎಚ್‌.ಡಿ.ರೇವಣ್ಣ ಸರಿಯಾಗಿ ಊಟ, ನಿದ್ದೆ ಮಾಡಿಲ್ಲ. ಹೀಗಾಗಿ. ಅಸಿಡಿಟಿಯಿಂದ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಎಸ್‌ಐಟಿ ಕಚೇರಿಯಿಂದ ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರೇವಣ್ಣ ಅವರನ್ನು ತಪಾಸಣೆ ನಡೆಸಿದ ವೈದ್ಯರು, ಗ್ಯಾಸ್‌ಟ್ರಿಕ್‌ ಹಾಗೂ ಜತೆಗೆ ಹರ್ನಿಯಾ ಸಮಸ್ಯೆಯೂ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಆಸ್ಪತ್ರೆ ಸುತ್ತ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿದೆ.

LEAVE A REPLY

Please enter your comment!
Please enter your name here