Home Uncategorized ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ

39
0

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಫೆಬ್ರವರಿ 16ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ ಮಾಡಿದರು.

ಸೋಮವಾರ ಇಲ್ಲಿನ ಶಾಂತಿನಗರದ ಬಸ್ ನಿಲ್ದಾಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಚಿವರಾದ ಝಮೀರ್ ಅಹಮದ್ ಖಾನ್, ಡಾ.ಎಂ.ಸಿ. ಸುಧಾಕರ್, ಶಾಸಕ ಬಾಲಕೃಷ್ಣ ಸೇರಿದಂತೆ ಇನ್ನಿತರ ಮುಖಂಡರೊಂದಿಗೆ ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸ್ವತಃ ಪುಟ್ಟಣ್ಣ ಅವರೇ ಕಣಕ್ಕಿಳಿದಿದ್ದಾರೆ.

ಈ ವೇಳೆ ಮಾತನಾಡಿದ ಝಮೀರ್ ಅಹಮದ್ ಖಾನ್, ‘ಪುಟ್ಟಣ್ಣ ಅವರು ಶಿಕ್ಷಕರ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವ ನಾಯಕರಾಗಿದ್ದು, ಅವರು ಈ ಬಾರಿ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸುಧಾಕರ್ ಮಾತನಾಡಿ, ‘ಈಗಾಗಲೇ ನಾಲ್ಕು ಬಾರಿ ಮೇಲ್ಮನೆಗೆ ಆಯ್ಕೆಯಾಗಿದ್ದ ಪುಟ್ಟಣ್ಣ, ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರಕಾರ ಬಗೆಹರಿಸಿದೆ. ಶಿಕ್ಷಕರು ಮತ್ತು ಶಿಕ್ಷಣದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಪೊಟ್ಟಣ್ಣ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಭ್ಯರ್ಥಿ ಪುಟ್ಟಣ್ಣ ಮಾತನಾಡಿ, ಶಿಕ್ಷಕರ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಂದಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಶಿಕ್ಷಕ ಸಮುದಾಯದ ಪ್ರತಿಯೊಂದು ಬೇಡಿಕೆಗಳನ್ನು ಈಡೇರಿಸಲು ಆದ್ಯತೆ ನೀಡುತ್ತೇವೆ. ಶಿಕ್ಷಕ ಸಮುದಾಯ ಮತ್ತೊಮ್ಮೆ ನನ್ನನ್ನು ಬೆಂಬಲಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here