Home Uncategorized ಶಿವಮೊಗ್ಗಕ್ಕೆ ಬಂದಿಳಿದ ಮೋದಿ: ರೂ.450 ಕೋಟಿ ವೆಚ್ಚದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

ಶಿವಮೊಗ್ಗಕ್ಕೆ ಬಂದಿಳಿದ ಮೋದಿ: ರೂ.450 ಕೋಟಿ ವೆಚ್ಚದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

22
0
Advertisement
bengaluru

ಶಿವಮೊಗ್ಗಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಭೇಟಿ ನೀಡಿದ್ದು, ಸೋಗಾನೆಯಲ್ಲಿ ರೂ.600 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದಾರೆ. ಶಿವಮೊಗ್ಗ: ಶಿವಮೊಗ್ಗಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಭೇಟಿ ನೀಡಿದ್ದು, ಸೋಗಾನೆಯಲ್ಲಿ ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದಾರೆ.

ನವದದೆಹಲಿಯಿಂದ ಸೇನಾ ವಿಮಾನದಲ್ಲಿ ಬಂದ ಮೋದಿಯವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನೇರವಾಗಿ ಬಂದಿಳಿದರು.

ಈ ವೇಳೆ ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್​, ಶಾಸಕ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ಸೇರಿ ಹಲವರು ಸ್ವಾಗತ ಕೋರಿದರು.

ಬಳಿಕ ವಿಮಾನ ನಿಲ್ದಾಣವನ್ನು ಮೋದಿಯವರು ಉದ್ಘಾಟನೆ ಮಾಡಿ, ಸಮಾರಂಭ ವೇದಿಕೆಯಲ್ಲಿ ಮೋದಿಯವರಿಗೆ ಶಾಲು ಹೊದಿಸಿ ಈಶ್ವರಪ್ಪ ಅವರು ಸನ್ಮಾನಿಸಿದರು. ಬಳಿಕ ಮೋದಿಯವರಿಗೆ ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಶಿವಮೊಗ್ಗ ಏರ್​ಪೋರ್ಟ್​ ಕಲಾಕೃತಿಯನ್ನು ಕಾಣಿಕೆ ನೀಡಿದರು.

bengaluru bengaluru

ಬಳಿಕ ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಸನ್ಮಾನ ಮಾಡಿದರು. ಹಸಿರು ಶಾಲು ಹೊದಿಸಿ, ಅಡಕೆ ಹಾರ ಹಾಕಿ, ಪೇಟ ತೊಡಿಸಿ, ನೇಗಿಲು ನೀಡಿ ಸನ್ಮಾನಿಸಿದರು.


bengaluru

LEAVE A REPLY

Please enter your comment!
Please enter your name here